ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ, ಕಾರವಾರ ವತಿಯಿಂದ ಮಂಜಗುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಅಂಕೋಲಾ ತಾಲೂಕಿನ ಮಂಜಗುಣಿ ಗ್ರಾಮದಿಂದ ಕುಮುಟಾ ತಾಲೂಕಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಶುಭ ಹಾರೈಸಿದರು.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವ ಮಂಕಾಳವೈದ್ಯ, ಮಾಜಿ ಸಚಿವರು, ಶಾಸಕ ಆರ್.ವಿ.ದೇಶಪಾಂಡೆ, ಶಾಸಕ ಭೀಮಣ್ಣ ನಾಯ್ಕ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

