ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (ಕೆಎಸ್ಒಯು) 2025-26ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ವಿವಿಧ ಯುಜಿಸಿ ಅನುಮೋದಿತ ಹಾಗೂ ‘ನ್ಯಾಕ್ ಎ+‘ ಮಾನ್ಯತೆ ಪಡೆದ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಲಭ್ಯವಿರುವ ಕೋರ್ಸ್ಗಳು:
ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಾದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಎಲ್ಐ.ಎಸ್ಸಿ, ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್ಸಿ, ಎಂ.ಎಸ್.ಡಬ್ಲ್ಯೂ, ಎಂ.ಎಲ್ಐ.ಎಸ್ಸಿ ಸೇರಿದಂತೆ ವಿವಿಧ ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಪ್ರೋಗ್ರಾಮ್ಗಳಿಗೆ ಪ್ರವೇಶಾತಿ ಪಡೆಯಲು ಅವಕಾಶವಿದೆ.
2026 ನೇ ಜನವರಿ 09 ರಿಂದಲೇ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣ www.ksoumysuru.ac.in ಮೂಲಕ Online Admission Portal ನಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಅಗತ್ಯ ದಾಖಲೆಗಳನ್ನು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ‘ಹಜ್ ಭವನ‘ದ ಪ್ರಾದೇಶಿಕ ಕೇಂದ್ರದಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದು.
ಶುಲ್ಕ ವಿನಾಯಿತಿಗಳು:
ವಿಶ್ವವಿದ್ಯಾಲಯವು ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ವಿಶೇಷ ರಿಯಾಯಿತಿಗಳನ್ನು ಘೋಷಿಸಿದ್ದು, ಕೋವಿಡ್-19 ರಿಂದ ಪೆÇೀಷಕರನ್ನು ಕಳೆದುಕೊಂಡ ಮಕ್ಕಳು, ದೃಷ್ಟಿಹೀನ ವಿದ್ಯಾರ್ಥಿಗಳು (ಬಿ.ಎಡ್ ಮತ್ತು ಎಂ.ಬಿ.ಎ ಹೊರತುಪಡಿಸಿ) ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.
ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರು, ರಕ್ಷಣಾ ಇಲಾಖೆಯ ನೌಕರರು/ನಿವೃತ್ತ ಸೈನಿಕರು, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳು ಹಾಗೂ ರಾಜ್ಯ ಸಾರಿಗೆ ಸಂಸ್ಥೆಗಳ (KSRTC, BMTC, NWKRTC, KKRTC) ನೌಕರರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡಲಾಗುವುದು (ಕೇವಲ ಯುಜಿ ಮತ್ತು ಪಿಜಿ ಪದವಿಗಳಿಗೆ).
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸರ್ಕಾರದಿಂದ ಎಸ್ಎಸ್ಪಿ ಪೋರ್ಟಲ್ ಮೂಲಕ ವಿದ್ಯಾರ್ಥಿ ವೇತನ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಬೆಂಗಳೂರು ಪ್ರಾದೇಶಿಕ ಕೇಂದ್ರ, ಹಜ್ ಭವನ, ತಿರುಮೇನಹಳ್ಳಿ ಕ್ರಾಸ್, ಹೆಣ್ಣೂರು ಮುಖ್ಯರಸ್ತೆ, ಬೆಂಗಳೂರು – 560064 ಇಲ್ಲಿಗೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 9448668880 ಅನ್ನು ಸಂಪರ್ಕಿಸಲು ಪ್ರಾದೇಶಿಕ ನಿರ್ದೇಶಕರಾದ ಗಿರೀಶ್ ಎಚ್.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

