ಇಂದು ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಭೇಟಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ಹೂಳೆತ್ತುವ ಕಾಮಗಾರಿ ಮುಕ್ತಾಯಗೊಂಡಿದ್ದು ಇದರ ನಾಮಫಲಕ ಅನಾವರಣ ಸಮಾರಂಭ ಫೆಬ್ರವರಿ-
26 ರಂದು ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ  ರವರು ಆಗಮಿಸಲಿದ್ದಾರೆ. ರಾಜಘಟ್ಟ ಗ್ರಾಮದ  ಕೆರೆ ಹಸ್ತಾಂತರ ಕಾರ್ಯಕ್ರಮಕ್ಕೆ ಬೆಂಗಳೂರು ಗ್ರಾಮಾಂತರ ಶ್ರೀ ಕ್ಷೇತ್ರ  ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘದ ಪದಾಧಿಕಾರಿಗಳು ನೋಡಲ್ ಅಧಿಕಾರಿಗಳು ತಾಲ್ಲೂಕು ಮೇಲ್ವಿಚಾರಕರು ವಲಯ ಮೇಲ್ವಿಚಾರಕರು ಆಗಮಿಸಲಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಸಮಿತಿ ತಿಳಿಸಿದೆ.

- Advertisement - 

 

 

- Advertisement - 

Share This Article
error: Content is protected !!
";