ಕಬ್ಬು ಬೆಳೆಗಾರ ರೈತರಿಗೆ 300 ಕೋಟಿ ಬಿಡುಗಡೆ ಮಾಡಿದ ಸರ್ಕಾರ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025-26
ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್‌ಗೆ 50 ರೂಪಾಯಿ ಆರ್ಥಿಕ ನೆರವಿನ ಮೊತ್ತವಾಗಿ 300 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಇಲಾಖೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ನವೆಂಬರ್‌8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ ಪ್ರತಿ ಟನ್‌ಕಬ್ಬಿಗೆ ಎಫ್‌ಆರ್‌ಪಿ ಮೇಲೆ 100 ರೂ. ಆರ್ಥಿಕ ನೆರವು ನೀಡುವ ನಿರ್ಧಾರ ಪ್ರಕಟಿಸಿದ್ದರು.

- Advertisement - 

ರಾಜ್ಯ ಸರ್ಕಾರ 50 ರೂ. ಹಾಗೂ ಸಕ್ಕರೆ ಕಾರ್ಖಾನೆಗಳು 50 ರೂ. ನೀಡಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದ್ದು, ಅದರದಂತೆ ರಾಜ್ಯ ಸರ್ಕಾರ ತನ್ನ ಪಾಲಿನ ಆರ್ಥಿಕ ನೆರವಿನ 300 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆ ಆಧರಿಸಿ ಕಬ್ಬು ಅಭಿವೃದ್ಧಿ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡಲಿದ್ದಾರೆ. ರಾಜ್ಯದ ರೈತರು ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡಿದ ಕಬ್ಬಿನ ಪ್ರಮಾಣ ಆಧರಿಸಿ ಅವರ ಬ್ಯಾಂಕ್‌ಖಾತೆಗಳಿಗೆ ನೇರವಾಗಿ ಪ್ರತಿ ಟನ್‌ಗೆ 50 ರೂಪಾಯಿಯಂತೆ ಜಮಾ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

- Advertisement - 

ಅದೇ ರೀತಿ ಕಬ್ಬು ಪೂರೈಕೆ ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಪ್ರತಿ ಟನ್‌ಕಬ್ಬಿಗೆ 50 ರೂ. ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳ 81 ಸಕ್ಕರೆ ಕಾರ್ಖಾನೆಗಳು 2025-26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ ಕಬ್ಬು ನುರಿಸಿದ್ದು, 29 ಕಾರ್ಖಾನೆಗಳಲ್ಲಿ ಕಬ್ಬು ನುರಿಸುವಿಕೆ ಮುಕ್ತಾಯವಾಗಿದೆ. ಇದುವರೆಗೆ 521 ಲಕ್ಷ ಮೆಟ್ರಿಕ್‌ಕಬ್ಬು ನುರಿಸಲಾಗಿದ್ದು, ಈ ಹಂಗಾಮಿನಲ್ಲಿ ಸುಮಾರು 600 ಲಕ್ಷ ಮೆಟ್ರಿಕ್‌ಟನ್‌ಕಬ್ಬು ನುರಿಸುವ ನಿರೀಕ್ಷೆ ಇದೆ ಎಂದು ಸಚಿವರು ವಿವರಿಸಿದ್ದಾರೆ.

600 ಲಕ್ಷ ಮೆಟ್ರಿಕ್‌ಟನ್‌ನುರಿಸುವ ಅಂದಾಜು ಆಧರಿಸಿ 300 ಕೋಟಿ ರೂ. ಆರ್ಥಿಕ ನೆರವು ಬಿಡುಗಡೆ ಮಾಡಲಾಗಿದೆ. ಮಾರ್ಚ್‌ಮೊದಲ ವಾರದ ವೇಳೆಗೆ ಪ್ರಸಕ್ತ ಹಂಗಾಮಿನ ಕಬ್ಬು ನುರಿಸುವಿಕೆ ಅಂತ್ಯವಾಗಲಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
error: Content is protected !!
";