ಫೆ.28 ರಿಂದ ಎರಡು ದಿನ ಶಾಂತಿಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗದಲ್ಲಿ ದುರಸ್ಥಿ ನಿರ್ವಹಣೆಯ  ಕೆಲಸ ಕೈಗೊಳ್ಳಬೇಕಿರುವುದರಿಂದ ಇದೇ ಫೆ.28 ರಿಂದ ಮಾರ್ಚ್ 01 ರವರೆಗೆ ಎರಡು ದಿನಗಳ ಕಾಲ ಶಾಂತಿಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಬೇಕು ಹಾಗೂ ನೀರನ್ನು ಮಿತವಾಗಿ ಬಳಸಿ. ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";