ಅರಾಜಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟ ಆಡಳಿತದಲ್ಲಿ ಒಬ್ಬರಿಗೂ ನೆಮ್ಮದಿ ಇಲ್ಲ?

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ
; ಅರಾಜಕತೆ ಗ್ಯಾರೆಂಟಿ “ಕಾಂಗ್ರೆಸ್‌ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ!” ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಂದ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

- Advertisement - 

ಖಾಲಿ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರಿಂದ ಮಾರ್ಚ್‌ರಿಂದ ಒಪಿಡಿ ಬಂದ್‌ ಆಗಲಿದೆ. 37,000 ಕೋಟಿ ರೂ. ಬಾಕಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಾರ್ಚ್‌ರಂದು ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲಿದ್ದಾರೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಬಂಜಾರ, ಭೋವಿ, ಕೊರಮ, ಕೊರಚ ಮತ್ತು ಅಲೆಮಾರಿ ಸಮುದಾಯಗಳ ಪ್ರತಿಭಟನೆ ನಡೆಯುತ್ತಿದೆ.

- Advertisement - 

ಒಳಮೀಸಲಾತಿಯಿಂದ ಆಗಿರುವ ಅನ್ಯಾಯ ವಿರುದ್ಧ ಎಸ್ಸಿ ಬಲಗೈ ಸಮುದಾಯ ಪ್ರತಿಭಟನೆ, ಬಿಡದಿ ಟೌನ್‌ಶಿಪ್‌ಯೋಜನೆ, ಸೆಣಬು ಸಬ್ಸಿಡಿ ಬಂದ್‌, ಕಬ್ಬು ಬಿಲ್‌ಬಾಕಿ ವಿರುದ್ಧ ರೈತರಿಂದ ಬೀದಿಳಿಗಿದು ಪ್ರತಿಭಟನೆ ಮಾಡುತ್ತಿದ್ದಾರೆಂದು ಅಶೋಕ್ ಟೀಕಾಪ್ರಹಾರ ಮಾಡಿದರು.

ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಫೆಬ್ರವರಿ 27 ರಿಂದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ. 38 ತಿಂಗಳ ಹಿಂಬಾಕಿಗಾಗಿ ಸಾರಿಗೆ ನೌಕರರಿಂದ ಮುಷ್ಕರ.

ಅರಾಜಕ ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ ಸಾಕ್ಷಿ ಬೇಕೆ? ಇಡೀ ಕರ್ನಾಟಕ ಇಂದು ಅರಾಜಕತೆಯಲ್ಲಿದೆ ಎಂದು ಅಶೋಕ್ ವಾಗ್ದಾಳಿ ಮಾಡಿದ್ದಾರೆ.

 

Share This Article
error: Content is protected !!
";