ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಪಕ್ಷದ ಅಧ್ಯಕ್ಷರಾಗಿ ಮಾಜಿ ಶಾಸಕ ಹೆಚ್.ಎಂ. ರಮೇಶ್ ಗೌಡ ಅವರು ನೇಮಕವಾಗಿದ್ದಾರೆಂದು ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ ದೇವೇಗೌಡ ಅವರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್.ಡಿ ಕುಮಾರಸ್ವಾಮಿ ಅವರಿಂದ ನೇಮಕಾತಿ ಆದೇಶ ಪತ್ರವನ್ನು ರಮೇಶ್‌ಗೌಡ ಅವರು ಸ್ವೀಕರಿಸಿದರು.
ಬೃಹತ್‌ಬೆಂಗಳೂರು ಮಹಾನಗರ ಪಾಲಿಕೆಯನ್ನು ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪಶ್ಚಿಮ, ಮತ್ತು ಪೂರ್ವ ಐದು ಭಾಗಗಳಾಗಿ ವಿಂಗಡಿಸಿರುವ ಹಿನ್ನೆಲೆಯಲ್ಲಿ, ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಪಕ್ಷದ ಸಂಘಟನೆ ಹಾಗೂ ಐದು ವಿಭಾಗವಾರು ಪಾಲಿಕೆಗಳಲ್ಲಿ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

