16 ಮಂದಿ ಡ್ರಗ್ಸ್ ಪೆಡ್ಲರ್ ಗಳ ಬಂಧನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಬ್ಬರು ಮಹಿಳೆಯರು ಸೇರಿ ಒಟ್ಟು 16 ಪೆಡ್ಲರ್​ಗಳನ್ನು ವಿವಿಧ ಡ್ರಗ್ಸ್ ಪ್ರಕರಣಗಳಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸಿಸಿಬಿ ಹಾಗೂ ನಗರದ ವಿವಿಧ ಠಾಣೆಗಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿದೇಶಿ ಪ್ರಜೆಗಳು ಸೇರಿದಂತೆ ಹೊರ ರಾಜ್ಯದ 8 ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಜೊತೆಗೆ ನಗರದಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್
, ಮೂರು ಸಾವಿರ ಎಂಡಿಎಂ ಮಾತ್ರೆಗಳು ಮತ್ತು ಗಾಂಜಾ ಜಪ್ತಿ ಮಾಡಿದ್ದಾರೆ.

ಮಹಿಳೆ ಬಂಧನ-
ನೈಜೀರಿಯಾ ಪ್ರಜೆಯ ಡ್ರಗ್ಸ್ ಡಿಲೀಂಗ್​​ಗೆ ಸಾಥ್ ಕೊಡುತ್ತಿದ್ದ ಕಿಲಾಡಿ ಲೇಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಭಾಷಿಣಿ ಬಂಧಿತ ಮಹಿಳೆ. ಬಾಗಲೂರು ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು. ಬಂಧಿತ ಸುಭಾಷಿಣಿ
, ನೈಜೀರಿಯನ್​​ ಪ್ರಜೆಯೊಬ್ಬನ ಜೊತೆ ಸೇರಿ ಡ್ರಗ್ಸ್ ಡಿಲೀಂಗ್​​​ ಮಾಡುತ್ತಿದ್ದಳು. ವಿದೇಶಿ ಪ್ರಜೆ ನೈಜೀರಿಯಾದಿಂದ ಡ್ರಗ್ಸ್​ ತರಿಸಿಕೊಂಡು ಸುಭಾಷಿಣಿ ಮನೆಯಲ್ಲಿ ಶೇಖರಿಸಿಟ್ಟಿದ್ದ. ಆತ ಸೂಚಿಸಿದ್ದ ವಿಳಾಸ, ಗ್ರಾಹಕರಿಗೆ ಸುಭಾಷಿಣಿ ತಲುಪಿಸುತ್ತಿದ್ದಳು.

- Advertisement - 

ವಿದೇಶಿ ಡ್ರಗ್ ಪೆಡ್ಲರ್ ಪರಾರಿ-
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ
, ಬಂಧಿತಳಿಂದ 2 ಕೋಟಿ ರೂ ಮೌಲ್ಯದ 300 ಎಕ್ಸ್ ಟೆಸಿ ಮಾತ್ರೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪರಾರಿಯಾಗಿರುವ ವಿದೇಶಿ ಡ್ರಗ್ ಪೆಡ್ಲರ್​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬೆಂಗಳೂರಿನಲ್ಲಿ ಕೋಟಿಗಟ್ಟಲೇ ಮಾದಕ ವಸ್ತುಗಳನ್ನು ಸಿಸಿಬಿ ಪೊಲೀಸರು ಸೀಜ್ ಮಾಡಿ ಪೆಡ್ಲರ್​ಗಳನ್ನು ಲಾಕ್​ ಮಾಡಿದ್ದರು. ಬಂಧಿತರಲ್ಲಿ ಬಹುಪಾಲು ನೆರೆ ರಾಜ್ಯದವರು ಸೇರಿ ವಿದೇಶಿಗರನ್ನು ಕಂಬಿಹಿಂದೆ ತಳ್ಳಿದ್ದರು. ಅಮೃತಹಳ್ಳಿ, ಹೆಬ್ಬಗೋಡಿ, ಶೇಷಾದ್ರಿಪುರಂ, ಜೆಬಿ ನಗರ, ಮಹಾಲಕ್ಷ್ಮೀ ಲೇಔಟ್, ಗೋವಿಂದರಾಜ್ ಠಾಣಾ ವ್ಯಾಪ್ತಿಗಳಲ್ಲಿ ಪೆಡ್ಲರ್​ಗಳನ್ನು ಲಾಕ್ ಮಾಡಿ ಬರೋಬ್ಬರಿ 20 ಕೋಟಿ ರೂ ಮೌಲ್ಯದ ವಿವಿಧ ಬಗೆಯ ಮಾದಕ ವಸ್ತುಗಳನ್ನು ಸೀಜ್​ ಮಾಡಿದ್ದರು.

- Advertisement - 

 

Share This Article
error: Content is protected !!
";