ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2026-27ನೇ ಶೈಕ್ಷಣಿಕ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪ್ರಕ್ರಿಯೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪ್ರಕ್ರಿಯೆಯಲ್ಲಿರುತ್ತದೆ. ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಒಳಮೀಸಲಾತಿಯನ್ನು ಕಲ್ಪಿಸಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ವರ್ಗೀಕರಣ ಮಾಡಿರುವ ಕಾರಣದಿಂದ KREIS-2026 ಕ್ಕೆ ಅರ್ಜಿ ಸಲ್ಲಿಸಿದ್ದು, ಒಳಮೀಸಲಾತಿ ವರ್ಗಗಳನ್ನು ನಮೂದಿಸದೇ ಬಾಕಿ ಇರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮಾತ್ರ ಒಳಮೀಸಲಾತಿ ವಿವರ ಇರುವ ಆರ್.ಡಿ. ಸಂಖ್ಯೆಯನ್ನು 2026 ರ ಮಾರ್ಚ್ 30 ರೊಳಗೆ ನಮೂದಿಸುವಂತೆ ಸೂಚಿಸಿರುತ್ತಾರೆ.
ಪರಿಶಿಷ್ಟ ಜಾತಿ ಅಭ್ಯರ್ಥಿಗಳ ಒಳಮೀಸಲಾತಿ ಜಾತಿ ಪ್ರಮಾಣ ಪತ್ರವನ್ನು ಸಂಬಂಧಿಸಿದ ತಹಶೀಲ್ದಾರ್ ರವರ ಕಛೇರಿಯಿಂದ ಪಡೆದ ಜಾತಿ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆಯನ್ನು ಅರ್ಜಿ ಸಲ್ಲಿಸಿದ ವಸತಿ ಶಾಲೆಗಳಿಗೆ ಭೇಟಿ ನೀಡಿ ಕೆಇಎ ಪೋರ್ಟಲ್ ನಲ್ಲಿ ಸಲ್ಲಿಸಲಾದ ಆನ್ ಲೈನ್ ಅರ್ಜಿಯಲ್ಲಿ ನಮೂದಿಸಲು ಮಾರ್ಚ್ 30 ವರೆಗೆ ಹೆಚ್ಚಿನ ಕಾಲಾವಕಾಶ ನೀಡಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

