ಸ್ವಾಮಿ ಅದ್ಭುತಾನಂದರ ಗುರುಭಕ್ತಿ ಅನನ್ಯವಾದದ್ದು: ಲಕ್ಷ್ಮೀದೇವಮ್ಮ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಸ್ವಾಮಿ ಅದ್ಭುತಾನಂದರು ಶ್ರೀರಾಮಕೃಷ್ಣ ಪರಮಹಂಸರ ಮೇಲಿಟ್ಟಿದ್ದ ಗುರುಭಕ್ತಿ ಅನನ್ಯವಾದದ್ದು ಎಂದು ಚಳ್ಳಕೆರೆಯ ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಎಚ್ ಲಕ್ಷ್ಮೀದೇವಮ್ಮ ಅಭಿಪ್ರಾಯಪಟ್ಟರು. 

                                 ತ್ಯಾಗರಾಜನಗರದ ಸದ್ಭಕ್ತರಾದ ನಂಜಮ್ಮ ಕೆಂಚಪ್ಪ ಶಿಕ್ಷಕರ ಸವಿತಾ ನಿವಾಸದಲ್ಲಿ “ಸ್ವಾಮಿ ಅದ್ಭುತಾನಂದ”ರ ಜಯಂತ್ಯುತ್ಸವದ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಸ್ವಾಮಿ ಅದ್ಭುತಾನಂದರ ಜೀವನ-ವ್ಯಕ್ತಿತ್ವ ಹಾಗೂ ಸಂದೇಶಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

- Advertisement - 

ಜಯಂತೋತ್ಸವದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ, ಶ್ರೀರಾಮಕೃಷ್ಣರ ನಾಮಸ್ಮರಣೆ, ಸುನೀತಾ ಗೋಪಾಲಕೃಷ್ಣ ಮತ್ತು ಮಾಕಂಸ್ ಲಕ್ಷ್ಮೀ ಬಾಲಾಜೀ ಅವರಿಂದ ವಿಶೇಷ ಭಜನೆ, ಯತೀಶ್ ಎಂ ಸಿದ್ದಾಪುರ ಅವರಿಂದ “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಕಾರ್ಯಕ್ರಮ, ದಿವ್ಯತ್ರಯರಿಗೆ ಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. 

ಸತ್ಸಂಗ ಕಾರ್ಯಕ್ರಮದಲ್ಲಿ ಎಂ ಗೀತಾ ನಾಗರಾಜ್, ಎಂ ಲಕ್ಷ್ಮೀದೇವಮ್ಮ, ಸುವರ್ಣಮ್ಮ, ಅನುಸೂಯ ರಾಘವೇಂದ್ರ, ಸೌಮ್ಯ ಪ್ರಸಾದ್, ಸರಸ್ವತಿ ರಾಜು,ಪ್ರೇಮಾ, ಸರ್ವಮಂಗಳಾ ಶಿವಣ್ಣ ಭಾಗವಹಿಸಿದ್ದರು.

- Advertisement - 

 

 

 

Share This Article
error: Content is protected !!
";