ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಪ್ರಯತ್ನ-ಸಿಎಂ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಅಮೆರಿಕಾವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ.

- Advertisement - 

ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ.

ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ಸಹ ವಾಪಸ್ಸು ಕರೆತರಲಾಗುವುದು. ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ.

- Advertisement - 

ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈನಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಈ ವೇಳೆ ತಾವು ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

Share This Article
error: Content is protected !!
";