ದುಬೈ ಕನ್ನಡಿಗರಿಗೆ ಧೈರ್ಯ ತುಂಬಿರುವೆ-ಸಿದ್ದರಾಮಯ್ಯ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಸ್ರೇಲ್ – ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಮಾತನಾಡಿ ಧೈರ್ಯ ತುಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ದುಬೈ ಸೇರಿದಂತೆ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸದ್ಯದ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದು, ಬಳಿಕ ಅವರನ್ನು ತವರಿಗೆ ವಾಪಸ್ ಕರೆ ತರುವ ಸಂಬಂಧ ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.

- Advertisement - 

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವುದು ತುಸು ಸಮಾಧಾನಕರ ವಿಚಾರ. ಯಾರೊಬ್ಬರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement - 
Share This Article
error: Content is protected !!
";