‘ವಾಟರ್ ಅಮ್ಯೂಸ್‌ಮೆಂಟ್ ಪಾರ್ಕ್’ಲೋಕಾರ್ಪಣೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಲಮಟ್ಟಿಯಲ್ಲಿ ವಾಟರ್ ಅಮ್ಯೂಸ್‌ಮೆಂಟ್ ಪಾರ್ಕ್ಲೋಕಾರ್ಪಣೆ ಮಾಡಲಾಯಿತು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಬಸನಾಡಿನ ಹೆಮ್ಮೆಯ ತಾಣವಾದ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ಸಮೀಪ ಅಂದಾಜು 5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಜಲ ವಿನೋದ ಉದ್ಯಾನವನ್ನು ಸಚಿವ ಸಂಪುಟದ ಸಹೋದ್ಯೋಗಿ ಶಿವಾನಂದ ಪಾಟೀಲ ಅವರೊಂದಿಗೆ ಸಚಿವರು ಉದ್ಘಾಟಿಸಿ ಮಾತನಾಡಿದರು.

- Advertisement - 

ಆಧುನಿಕ ತಂತ್ರಜ್ಞಾನದಿಂದ ರೂಪುಗೊಂಡಿರುವ ಈ ವಾಟರ್ ಅಮ್ಯೂಸ್ಮೆಂಟ್ ಪಾರ್ಕ್ ನಲ್ಲಿ ವಿವಿಧ ಜಲಕ್ರೀಡೆಗಳು, ಮಕ್ಕಳಿಗೆ ವಿಶೇಷ ಆಟೋಪಕರಣಗಳು ಹಾಗೂ ಕುಟುಂಬ ಸಮೇತ ವಿಶ್ರಾಂತಿಗೆ ಅನುಕೂಲವಾದ ಸೌಲಭ್ಯಗಳು ಕಲ್ಪಿಸಲಾಗಿದೆ. ಮನರಂಜನೆ ಕೇಂದ್ರವಷ್ಟೇ ಅಲ್ಲ, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ, ಜಿಲ್ಲೆಯ ಆರ್ಥಿಕತೆಗೆ ಚೈತನ್ಯ ತುಂಬುವ ಯೋಜನೆಯಾಗಿದೆ.

ಮುಂದಿನ ದಿನಗಳಲ್ಲಿ ಇನ್ನಷ್ಟು ಆಕರ್ಷಕ ಸೌಲಭ್ಯಗಳನ್ನು ಸೇರಿಸಿ, ಈ ತಾಣವನ್ನು ರಾಜ್ಯ ಮಟ್ಟದ ಅಮ್ಯೂಸ್ ಮೆಂಟ್ ಪಾರ್ಕ್ ಆಗಿ ಅಭಿವೃದ್ಧಿಪಡಿಸುವ ಸಂಕಲ್ಪ ಹೊಂದಿದ್ದೇವೆ. ಈ ಯೋಜನೆ ವಿಜಯಪುರ ಮತ್ತು ಬಾಗಲಕೋಟೆ ಅವಳಿ ಜಿಲ್ಲೆಗಳು ಮಾತ್ರವಲ್ಲದೆ, ಸಂಪೂರ್ಣ ಉತ್ತರ ಕರ್ನಾಟಕವನ್ನು ಪ್ರವಾಸೋದ್ಯಮ ನಕ್ಷೆಯಲ್ಲಿ ಇನ್ನಷ್ಟು ಪ್ರಭಾವಿಯಾಗಿ ಗುರುತಿಸುವ ಹೆಜ್ಜೆಯಾಗಲಿದೆ ಎಂದು ಎಂ.ಬಿ ಪಾಟೀಲ್ ಅಭಿಪ್ರಾಯಪಟ್ಟರು.

- Advertisement - 

ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರ್ ಗಳಿಂದ 524 ಮೀಟರ್ ಗೆ ಹೆಚ್ಚಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆ. ಈ ಕ್ರಮದಿಂದ ಸುಮಾರು 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆತು, ರೈತರ ಬದುಕಿನಲ್ಲಿ ಸಮೃದ್ಧಿಯ ಹೊಸ ಅಧ್ಯಾಯ ಆರಂಭವಾಗಲಿದೆ.

ಜನಪ್ರತಿನಿಧಿಗಳು, ಕೃಷ್ಣ ಭಾಗ್ಯ ಜಲನಿಗಮದ ಅಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದು ಉದ್ಘಾಟನಾ ಸಮಾರಂಭವನ್ನು ಯಶಸ್ವಿಗೊಳಿಸಿದರು.

 

Share This Article
error: Content is protected !!
";