ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು 1108 ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು, ಜಗದ್ಗುರು 1108 ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಶ್ರೀ ಮ. ನಿ. ಪ್ರ. ಡಾ. ಬಸವ ಮರುಳಸಿದ್ಧ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ
ನಗರದ ಬೈಪಾಸ್ ರಸ್ತೆಯ ದೊಡ್ಡಕುರುಬರಹಳ್ಳಿಯ ಬಸವತತ್ವ ಪೀಠದಲ್ಲಿ ನಡೆದ ‘ಶ್ರೀ ಮ. ನಿ. ಪ್ರ. ಚಂದ್ರಶೇಖರ ಮಹಾಸ್ವಾಮಿಗಳವರ 171 ನೇ ಜಯಂತಿ, ಶ್ರೀ ಮ. ನಿ. ಪ್ರ. ಜಯಚಂದ್ರಶೇಖರ ಮಹಾಸ್ವಾಮಿಗಳವರ 30 ನೇ ಸಂಸ್ಮರಣೆ, ಬಸವತತ್ವ ಸಮಾವೇಶ ಹಾಗೂ ಶ್ರೀ ಬಸವತತ್ವ ಪೀಠದ ಸುವರ್ಣ ಮಹೋತ್ಸವ‘ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ಅವರು ಭಾಗವಹಿಸಿ ಮಾತನಾಡಿದರು.
ಬಸವ ತತ್ವ ನಮ್ಮೊಳಗೆ ಬರಬೇಕು ಎಂದರೆ ವಚನಗಳ ಸಾರವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿರುವ ಜಾತೀಯತೆ, ಅಸ್ಪ್ರಶ್ಯತೆಗಳು ರಾಷ್ಟ್ರವನ್ನು ದುರ್ಬಲಗೊಳಿಸುತ್ತದೆ. ಸಮಾಜ ಸಬಲವಾಗಬೇಕೆಂದರೆ ಬಸವ ತತ್ವದ ಅನಿವಾರ್ಯತೆಯಿದೆ ಎಂದು ರವಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಸೇರಿದಂತೆ ವಿವಿಧ ಗಣ್ಯರು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

