ದುರಸ್ತಿ ಕಾಣದ ಶುದ್ಧ ಕುಡಿಯುವ ನೀರಿನ ಘಟಕ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್ ಹಿರಿಯೂರು :
ತಾಲೂಕಿನ ಮದ್ದಿಹಳ್ಳಿ ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ವರ್ಷವಾಗುತ್ತಾ ಬಂದರೂ ಇದುವರೆಗೂ ರಿಪೇರಿ ಮಾಡಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಬಾಗಿಲು ಹಾಕಿದ ಶುದ್ಧ ಕುಡಿಯುವ ನೀರಿನ ಘಟಕದ ವಿಡಿಯೋ ಪತ್ರಿಕೆಗಳಿಗೆ ಕಳಿಸಿರುವ ಗ್ರಾಮಸ್ಥರು ಗ್ರಾಮದಲ್ಲಿ ಶುದ್ಧ ಕುಡಿಯುವ ಘಟಕ ಕೆಟ್ಟು ಹತ್ತಿರತ್ತಿರ ವರ್ಷವಾಗುತ್ತಿದೆ.

- Advertisement - 

ಜನರು ಫ್ಲೋರೈಡ್ ಯುಕ್ತ ನೀರನ್ನೇ ಕುಡಿದು ಕಾಯಿಲೆ ಬೀಳುತ್ತಿದ್ದಾರೆ. ಶುದ್ಧ ಕುಡಿಯುವ ನೀರಿಗಾಗಿ ಗ್ರಾಮದ ಜನರು ಪಕ್ಕದ ಖಂಡೇನಹಳ್ಳಿಗೆ ಹೋಗಬೇಕು. ಶುದ್ಧ ಕುಡಿಯುವ ನೀರಿನ ಘಟಕ ರಿಪೇರಿ ಮಾಡಿಸಿ ಎಂದು ಪಿಡಿ ಕೋಟೆ ಗ್ರಾಮ ಪಂಚಾಯ್ತಿಗೆ ಮನವಿ ಮಾಡಲು ಹೋದರೆ ಅಧಿಕಾರಿಗಳೇ ಸಿಗುವುದಿಲ್ಲ.

ಅವರ ಬೇಜವಾಬ್ದಾರಿತನದಿಂದ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಸಿಗದಂತಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಘಟಕವನ್ನು ರಿಪೇರಿ ಮಾಡಿಸಿ ಗ್ರಾಮದ ಜನರ ಆರೋಗ್ಯ ಕಾಪಾಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

- Advertisement - 

 

Share This Article
error: Content is protected !!
";