ತೀರ್ಮಾನ ಆಗದ ಅಧಿಕಾರ ಹಂಚಿಕೆ, ಕಾರ್ಯಕರ್ತರು, ಶಾಸಕರು ಅಧಿಕಾರಿಗಳಲ್ಲಿ ಗೊಂದಲ ಸೃಷ್ಠಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದು ಸದ್ಯದ ಸ್ಥಿತಿಯೇ ಮುಂದುವರೆದರೆ ಮುಂದೆ ಅಧಿಕಾರಕ್ಕೆ ಬರೋದು ಕಷ್ಟ ಎಂಬ ಶಾಸಕ ಬಾಲಕೃಷ್ಣ ಅವರ ಹೇಳಿಕೆಗೆ ಸಚಿವ ಸತೀಶ್​​ ಜಾರಕಿಹೊಳಿ ಸಹಮತ ವ್ಯಕ್ತಪಡಿಸಿದ್ದಾರೆ.
ಪಕ್ಷದಲ್ಲಿ ಸ್ಪಷ್ಟತೆಯ ಕೊರತೆಯಿಂದಾಗಿ ಕಾರ್ಯಕರ್ತರು
, ಶಾಸಕರು ಮತ್ತು ಅಧಿಕಾರಿಗಳಲ್ಲಿ ಗೊಂದಲ ಉಂಟಾಗಿದೆ. ಈ ಪರಿಸ್ಥಿತಿ ಶೀಘ್ರವಾಗಿ ತಿಳಿಗೊಳ್ಳಬೇಕು. ಪಕ್ಷದ ಭವಿಷ್ಯದ ಬಗ್ಗೆ ಇರುವ ಅನಿಶ್ಚಿತತೆಯನ್ನು ನಿವಾರಿಸಲು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕು. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್‌ನಿಂದ ಸ್ಪಷ್ಟ ನಿರ್ದೇಶನ ಬಂದರೆ ಮಾತ್ರ ಈ ಗೊಂದಲ ನಿಲ್ಲುತ್ತದೆ. ಹೈಕಮಾಂಡ್ ಒಂದು ದಿನದಲ್ಲಿಯೇ ಈ ಸಮಸ್ಯೆ ಬಗೆಹರಿಸುವ ಶಕ್ತಿ ಹೊಂದಿದೆ ಎಂದು ಬಾಲಕೃಷ್ಣ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ.

- Advertisement - 
Share This Article
error: Content is protected !!
";