ಕೆಎಸ್‌ಆರ್‌ಟಿಸಿ ಬಸ್ಸಿಗೆ ದಿಢೀರ್ ಬೆಂಕಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಸಾರಿಗೆ ನಿಗಮಗಳು ಸಮರ್ಪಕ ನಿರ್ವಹಣೆಯಿಲ್ಲದೆ ಸೊರಗುತ್ತಿರುವ ಕಾರಣ ಕೆಎಸ್‌ಆರ್‌ಟಿಸಿ ಬಸ್‌ಗಳ ಚಕ್ರಗಳು ನಡು ರಸ್ತೆಯಲ್ಲೇ  ಕಳಚಿ ಬೀಳುತ್ತಿದ್ದವು, ಇದೀಗ ಬೆಂಕಿಯೂ ಹೊತ್ತಿಕೊಳ್ಳುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಕಾಂಗ್ರೆಸ್‌ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿ ಹೋಗಿದೆ. ಗ್ಯಾರಂಟಿಗಳಿಂದಾಗಿ ಜನಸಾಮಾನ್ಯರ ಪ್ರಾಣಕ್ಕಂತೂ ಗ್ಯಾರಂಟಿಯೇ ಇಲ್ಲದಂತಾಗಿದೆ.

- Advertisement - 

ಚಿಕ್ಕಮಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ಆಘಾತಕಾರಿಯಾದುದು. ಫ್ರೀ ಟಿಕೆಟ್‌ಗಳು ಜನರನ್ನು ಯಮನೂರಿಗೆ ಉಚಿತವಾಗಿ ಕರೆದುಕೊಂಡು ಹೋಗುವ ಮುನ್ನ ಕಾಂಗ್ರೆಸ್ ಸರ್ಕಾರ ಎಚ್ಚೆತ್ತುಕೊಳ್ಳಲಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ. ‌

 

- Advertisement - 

 

Share This Article
error: Content is protected !!
";