ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಹಾಗೂ ಕಾಲೇಜು ನಿವೃತ್ತ ಶಿಕ್ಷಕರ ಸಂಘಗಳ ಒಕ್ಕೂಟ ಜಿಲ್ಲಾ ಘಟಕ ಮತ್ತು ಎನ್.ಎಂ.ಕಿಡ್ನಿ ಕೇರ್ ಸಹಯೋಗದೊಂದಿಗೆ ವಿಶ್ವ ಕಿಡ್ನಿ ದಿನಾಚರಣೆ ಪ್ರಯುಕ್ತ ಮಾ.೮ ರಂದು ಬೆಳಿಗ್ಗೆ ೧೧-೧೫ ಕ್ಕೆ ಐ.ಎಂ.ಎ.ಹಾಲ್ನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತೆ ಎನ್.ಮಂಜುಶ್ರಿ ಶಿಬಿರ ಉದ್ಘಾಟಿಸಲಿದ್ದಾರೆ. ಕಾಲೇಜು ನಿವೃತ್ತ ಶಿಕ್ಷಕರ ಸಂಘಗಳ ಒಕ್ಕೂಟ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಟಿ.ಹೆಚ್.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಂಜಿತ್ಕುಮಾರ್ ಭಂಡಾರು, ಅಪರ ಜಿಲ್ಲಾಧಿಕಾರಿ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಕರ್ನಾಟಕ ರಾಜ್ಯ ಕಾಲೇಜು ನಿವೃತ್ತ ಶಿಕ್ಷಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರೊ.ಕೆ.ಜಿ.ಲೋಕೇಶ್, ಎನ್.ಎಂ.ಕಿಡ್ನಿಕೇರ್ನ ಡಾ.ಮುರಳಿ ಮುಪ್ಪರಪು ಇವರುಗಳು ಆಗಮಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ : ೯೪೮೨೯೬೯೭೦೦ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

