ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ (ಸಿ.ಎಂ.ಕೆ.ಕೆ.ವೈ) ಅಡಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸ್ವ-ಉದ್ಯೋಗ ಹೊಲಿಗೆ ವೃತ್ತಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಹೊಲಿಗೆಯಂತ್ರ ಹಾಗೂ ಟೂಲ್‍ಕಿಟ್ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಸೇವಾ ಇಂಟಿಗ್ರೇಟೆಡ್ ಡೆವಲಪ್‍ಮೆಂಟ್ ಸೊಸೈಟಿ ಚಿತ್ರದುರ್ಗ ತರಬೇತಿ ಸಂಸ್ಥೆಯ ಸಹಯೋಗದಲ್ಲಿ 2022-23ನೇ ಸಾಲಿನಲ್ಲಿ ತರಬೇತಿ ಪಡೆದ ಒಟ್ಟು 149 ಅಭ್ಯರ್ಥಿಗಳ ಪೈಕಿ 133 ಫಲಾನುಭವಿಗಳನ್ನು ದೂರವಾಣಿ ಕರೆ ಮತ್ತು ಅಂಚೆ ಮೂಲಕ ಸಂಪರ್ಕಿಸಲು ಪ್ರಯತ್ನಿಸಲಾಗಿತ್ತು. ಆದರೆ, ಹಲವು ಕಾರಣಗಳಿಂದಾಗಿ ಈ 133 ಫಲಾನುಭವಿಗಳು ಸಂಪರ್ಕಕ್ಕೆ ಸಿಗದ ಕಾರಣ ಅವರಿಗೆ ಯೋಜನೆಯ ಸೌಲಭ್ಯಗಳನ್ನು ವಿತರಿಸಲು ಸಾಧ್ಯವಾಗಿಲ್ಲ.
ಆದ್ದರಿಂದ, ಈ ತರಬೇತಿ ಸಂಸ್ಥೆಯಲ್ಲಿ ಸ್ವ-ಉದ್ಯೋಗ ಹೊಲಿಗೆ ವೃತ್ತಿಯಲ್ಲಿ ತರಬೇತಿ ಪಡೆದಿರುವ ಅರ್ಹ ಫಲಾನುಭವಿಗಳು ಕೂಡಲೇ ತಮ್ಮ ವೃತ್ತಿ ತರಬೇತಿ ಪ್ರಮಾಣ ಪತ್ರದೊಂದಿಗೆ ತಕ್ಷಣವೇ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಸಂಪರ್ಕಿಸಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-234050 ಅಥವಾ ಮೊಬೈಲ್ ಸಂಖ್ಯೆ 7337823880 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

