ಚಂದ್ರವಳ್ಳಿ ನ್ಯೂಸ್, ಹರಿಹರ:
ಹರಿಹರ ತಾಲ್ಲೂಕಿನ ದೊಗ್ಗಳ್ಳಿ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟಡ ನಿರ್ಮಾಣ ಕಾಮಗಾರಿಗೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೂಮಿಪೂಜೆ ನೆರವೇರಿಸಲಾಯಿತು.
ಸುಮಾರು 65 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಆರೋಗ್ಯ ಮಂದಿರ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಈ ಮಹತ್ವದ ಯೋಜನೆ ಜಾರಿಗೊಳ್ಳುತ್ತಿದೆ.
ಈ ಆರೋಗ್ಯ ಮಂದಿರ ನಿರ್ಮಾಣದಿಂದ ಸ್ಥಳೀಯ ಗ್ರಾಮಸ್ಥರಿಗೆ ಸಮೀಪದಲ್ಲೇ ಗುಣಮಟ್ಟದ ಆರೋಗ್ಯ ಸೌಲಭ್ಯಗಳು ಲಭ್ಯವಾಗಲಿದೆ ಎಂದು ಡಾ.ಪ್ರಭಾ ಅಭಿಪ್ರಾಯಪಟ್ಟರು.

