“ವಜ್ರ ವಿಸ್ತಾರ” ಹವಾನಿಯಂತ್ರಿತ ಬಸ್ ಸೇವೆಗೆ ಚಾಲನೆ ನೀಡಿದ ಸಚಿವ ರಾಮಲಿಂಗಾರೆಡ್ಡಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ನಡುವಿನ ಸಂಪರ್ಕವನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ ಎಂದು ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ತಿಳಿಸಿದರು.

ರಾಮನಗರ ಹಾಗೂ ಕನಕಪುರ ಭಾಗದ ಜನರಿಗಾಗಿ ಬಿಎಂಟಿಸಿಯ ನೂತನ “ವಜ್ರ ವಿಸ್ತಾರ” ಹವಾನಿಯಂತ್ರಿತ ಬಸ್ ಸೇವೆಗಳನ್ನು ಹಸಿರು ನಿಶಾನೆ ತೋರುವ ಮೂಲಕ ಉದ್ಘಾಟಿಸಿ ಮಾತನಾಡಿದರು.

- Advertisement - 

ಇಂದಿನಿಂದ ಲಭ್ಯವಿರುವ ಸೇವೆಗಳು:
ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್) ರಾಮನಗರ
ಬನಶಂಕರಿ ಕನಕಪುರ
ನಮ್ಮ ಸರ್ಕಾರದ ಪ್ರಮುಖ ಗುರಿ ಸಾರ್ವಜನಿಕರಿಗೆ ಸುಕ್ಷೇಮ ಮತ್ತು ಅತ್ಯಾಧುನಿಕ ಸಾರಿಗೆ ಸೌಲಭ್ಯ ಒದಗಿಸುವುದಾಗಿದೆ ಎಂದು ಸಚಿವರು ಹೇಳಿದರು.

ಈ ಭಾಗದ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರಿಗೆ ಈ ಎಸಿ ಬಸ್ ಸೇವೆಗಳು ಅತ್ಯಂತ ಆರಾಮದಾಯಕ ಪ್ರಯಾಣದ ಅನುಭವ ನೀಡಲಿವೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

- Advertisement - 

ಈ ಸಂದರ್ಭದಲ್ಲಿ ಶಾಸಕ ಹೆಚ್.ಎ.ಇಕ್ಬಾಲ್ ಹುಸೇನ್, ಬಿಎಂಟಿಸಿ ಅಧ್ಯಕ್ಷ ವಿ. ಎಸ್ ಆರಾಧ್ಯ, ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಕೆ.ಬಿ, ಸ್ಥಳೀಯ ಮುಖಂಡರು, ಅಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

 

Share This Article
error: Content is protected !!
";