ಮುಖ್ಯಮಂತ್ರಿ ರಾಜ್ಯಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಪಾಟ್ನಾ (ಬಿಹಾರ):
ಮಹತ್ವದ ಬೆಳವಣಿಗೆ ಒಂದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್​ ರಾಜ್ಯಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅವರ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತೀನ್​ ನಬಿನ್​ ಕೂಡ ನಾಮತ್ರ ಸಲ್ಲಿಕೆ ಮಾಡಿದ್ದಾರೆ.

ಎನ್​ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನಿಂದಾಗಿ ನವೆಂಬರ್​ನಲ್ಲಿ ಬಿಹಾರ ಸಿಎಂ ಆಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಜೆಡಿಯು ನಾಯಕ ನಿತೀಶ್ ಕುಮಾರ್​ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್​ ಶಾ: ರಾಜ್ಯಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು
, ಈ ವೇಳೆ ಬಿಹಾರದಲ್ಲಿನ ಎನ್​ಡಿಎ ನಾಯಕರ ನಾಮಪತ್ರ ಸಲ್ಲಿಕೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಪಾಟ್ನಾಕ್ಕೆ ಆಗಮಿಸಿದ್ದರು.

- Advertisement - 

ಪಾಟ್ನಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ನೇರವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್​ ನಬಿನ್​ ನಿವಾಸಕ್ಕೆ ಭೇಟಿ ನೀಡಿ, ಚರ್ಚೆ ನಡೆಸಿದರು.

ಬಳಿಕ ನಾಮಪತ್ರ ಸಲ್ಲಿಕೆಗೆ ಆಗಮಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಕೂಡ ಅವರೊಂದಿಗೆ ಹಾಜರಿದ್ದರು.
ಕೇಂದ್ರ ಸಚಿವ ಮತ್ತು ಜೆಡಿಯು ನಾಯಕ ರಾಮ್ ನಾಥ್ ಠಾಕೂರ್
, ಬಿಜೆಪಿಯ ಶಿವೇಶ್ ಕುಮಾರ್, ರಾಷ್ಟ್ರೀಯ ಲೋಕ ಮೋರ್ಚಾ ಅಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಸೇರಿದಂತೆ ಇತರರು ನಾಮಪತ್ರ ಸಲ್ಲಿಸಿದವರಲ್ಲಿ ಸೇರಿದ್ದಾರೆ.

- Advertisement - 

ರಾಜ್ಯಸಭೆಯ ಐದು ಸ್ಥಾನಗಳಿಗೆ ಮಾರ್ಚ್ 16ರಂದು ಚುನಾವಣೆ ನಡೆಯಲಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ 202 ಶಾಸಕರನ್ನು ಹೊಂದಿರುವ ಎನ್‌ಡಿಎ, ಅವುಗಳಲ್ಲಿ ನಾಲ್ಕು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ನಿರೀಕ್ಷೆಯಿದೆ.

25 ಶಾಸಕರನ್ನು ಹೊಂದಿರುವ ಹಾಗೂ ಬಿಹಾರ ವಿಧಾನಸಭೆಯಲ್ಲಿ ವಿರೋಧ ಪಕ್ಷವಾಗಿರುವ ಆರ್‌ಜೆಡಿ ಉದ್ಯಮಿ ಮತ್ತು ಹಾಲಿ ರಾಜ್ಯಸಭಾ ಸದಸ್ಯ ಅಮರೇಂದ್ರ ಧಾರಿ ಸಿಂಗ್ ಅವರನ್ನು ಕಣಕ್ಕಿಳಿಸಿದೆ. ರಾಜ್ಯಸಭೆಗೆ ಆಯ್ಕೆಯಾದವರ ಅಧಿಕಾರಾವಧಿ ಏಪ್ರಿಲ್ 9 ರಿಂದ ಪ್ರಾರಂಭವಾಗಲಿದೆ.

ನಿತೀಶ್ ಅವರು ಸದ್ಯಕ್ಕೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಎನ್‌ಡಿಎ ಮೂಲಗಳು ತಿಳಿಸಿವೆ. ಅವರ ಮಗ ನಿಶಾಂತ್ ಕುಮಾರ್ ಜೆಡಿಯು ಸೇರಲಿದ್ದು, ನಿತೀಶ್ ಕೇಂದ್ರಕ್ಕೆ ತೆರಳಿದ ನಂತರ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆ ಇದೆ ಎಂದು ವರದಿಗಳು ತಿಳಿಸಿವೆ.

Share This Article
error: Content is protected !!
";