ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರತಿಯೊಂದು ವಲಯಕ್ಕೂ ಸಮಾನ ಆದ್ಯತೆ ನೀಡಿ, ಸಮೃದ್ಧ ಕರ್ನಾಟಕದ ನಿರ್ಮಾಣಕ್ಕಾಗಿ 4.48 ಲಕ್ಷ ಕೋಟಿ ಮೊತ್ತದ 2026-2027 ಸಾಲಿನ ಬೃಹತ್ ಬಜೆಟ್ ಮಂಡಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಮೂಲಭೂತ ಸೌಕರ್ಯಗಳಿಗೆ ವಿಶೇಷ ಒತ್ತು ನೀಡುವ ಜೊತೆಗೆ, ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕನ್ನಡಿಗನ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ.
ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಲಿ ಎಂಬ ಆಶಯ ನಮ್ಮದು ಎಂದು ಡಿಸಿಎಂ ಶಿವಕುಮಾರ್ ತಿಳಿಸಿದ್ದಾರೆ.

