ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಮಂತ್ರಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜರುಗಿದ ಮಾಲೂರು ತಾಲ್ಲೂಕಿನ ಮುಖಂಡ ಹೂಡಿ ವಿಜಯಕುಮಾರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೂಡಿ ವಿಜಯಕುಮಾರ ಸೇರಿದಂತೆ ಅವರ ಸಾವಿರಾರು ಬೆಂಬಲಿಗರಿಗೆ ಪಕ್ಷದ ಬಾವುಟ ನೀಡಿ, ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡು, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಜೆಡಿಎಸ್ ಪಕ್ಷದ ಸಿದ್ಧಾಂತ, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ಮೆಚ್ಚಿ ಪಕ್ಷವನ್ನು ಸೇರ್ಪಡೆಯಾದ ಹೂಡಿ ವಿಜಯಕುಮಾರ್ ಮತ್ತು  ಅವರ ಧರ್ಮಪತ್ನಿ ಶ್ವೇತಾ ವಿಜಯಕುಮಾರ್  ಹಾಗೂ ಅವರ ಅಪಾರ ಬೆಂಬಲಿಗರಿಗೆ ಪಕ್ಷಕ್ಕೆ ಆತ್ಮೀಯವಾಗಿ ನಿಖಿಲ್ ಸ್ವಾಗತಿಸಿ, ವಂದನೆಗಳನ್ನು ಸಲ್ಲಿಸಿದರು.

- Advertisement - 

ಮುಂಬರುವ ದಿನಗಳಲ್ಲಿ ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವ ಮೂಲಕ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಕಾರ್ಯಕರ್ತರ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ, ಜೆಡಿಎಸ್ ಪಕ್ಷ ಎಲ್ಲರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಲು ನಾಡಿಗೆ ನಮ್ಮದೆಯಾದ ಕೊಡುಗೆ ನೀಡಲು ಕಂಕಣಬದ್ಧರಾಗಿ ದುಡಿಯೋಣ ಎಂದು ನಿಖಿಲ್ ಕರೆ ನೀಡಿದರು.

- Advertisement - 

ಈ ಸಂದರ್ಭದಲ್ಲಿ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ, ಶ್ರೀನಿವಾಸಪುರ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ, ಕೋಲಾರ ಸಂಸದ ಮಲ್ಲೇಶ ಬಾಬು, ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಮಾಜಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಚೌಡರೆಡ್ಡಿ,ಹೆಚ್.ಎಂ. ರಮೇಶಗೌಡ, ಮಹಿಳಾ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ, ಮುಖಂಡರಾದ ರಾಮೇಗೌಡ,  ಆರ್.ಪ್ರಭಾಕರ್, ಸಿಎಂಆರ್ ಶ್ರೀನಾಥ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

 

Share This Article
error: Content is protected !!
";