‘ಲಿಕ್ಕರ್ ಲಾಬಿ’ಗೆ ಮಣಿದ ಕಾಂಗ್ರೆಸ್ ಸರ್ಕಾರ-ವಿಜಯೇಂದ್ರ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಬಕಾರಿ ನೀತಿಯಲ್ಲಿ ಮದ್ಯದ ಕಂಪನಿಗಳಿಗೆ ಬೆಲೆ ನಿರ್ಧರಿಸುವ ಅಧಿಕಾರ ನೀಡಿರುವುದು ಲಿಕ್ಕರ್ ಲಾಬಿಗೆ ಈ ಕಾಂಗ್ರೆಸ್ ಸರ್ಕಾರ ಶರಣಾಗಿರುವುದಕ್ಕೆ ಸಾಕ್ಷಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.

ಇನ್ನೊಂದೆಡೆ, ಶಾಲೆಗಳ ಪೀಠೋಪಕರಣಕ್ಕೆ ಕೇವಲ 25 ಕೋಟಿ ರೂ. ನೀಡಿ, ಸೋಶಿಯಲ್ ಮೀಡಿಯಾ ನಿಷೇಧದಂತಹ ಗಿಮಿಕ್ಘೋಷಣೆ ಮಾಡುತ್ತಿರುವುದು ಹಾಸ್ಯಾಸ್ಪದ! ನಿಷೇಧವನ್ನು ಹೇಗೆ ಮಾಡುತ್ತದೆ ಎಂದು ಹೇಳದೆ, ತನ್ನ ಕಾರ್ಯವ್ಯಾಪ್ತಿಯ ಹೊರಗಿರುವುದನ್ನು ಹೇಳದೆ, ತಾಂತ್ರಿಕವಾಗಿ ಜಾರಿಗೊಳಿಸಲು ಅಸಾಧ್ಯವಾದ ಇಂತಹ ಹಗಲುಗನಸಿನ ಘೋಷಣೆಗಳು ಕೇವಲ ಜನರ ಗಮನವನ್ನು ಈ ರಾಜ್ಯ ಸರ್ಕಾರದ ಆಡಳಿತ ವೈಫಲ್ಯದಿಂದ ಬೇರೆಡೆಗೆ ಸೆಳೆಯುವ ತಂತ್ರವಷ್ಟೇ! ಮೂಲಸೌಕರ್ಯ ನೀಡಲು ಯೋಗ್ಯತೆ ಇಲ್ಲದ ಸರ್ಕಾರ, ಮಕ್ಕಳ ಮೇಲಿನ ಕಾಳಜಿಯ ನಾಟಕವಾಡುತ್ತಾ ಬುರುಡೆಘೋಷಣೆಗಳ ಮೂಲಕ ಪೋಷಕರ ಹಾದಿ ತಪ್ಪಿಸುತ್ತಿದೆ ಎಂದು ವಿಜಯೇಂದ್ರ ಟೀಕಾಪ್ರಹಾರ ಮಾಡಿದ್ದಾರೆ.

- Advertisement - 

ಬೆಲೆ ಕುಸಿತದಿಂದ ಕಂಗಾಲಾಗಿರುವ ನಮ್ಮ ಅನ್ನದಾತ ರೈತರಿಗೆ ಮಾರುಕಟ್ಟೆ ಮಧ್ಯಪ್ರವೇಶಕ್ಕೆ ಕೇವಲ 100 ಕೋಟಿ ರೂ ನೀಡಿರುವುದು ರೈತರ ಮೂಗಿಗೆ ತುಪ್ಪ ಸವರುವ ಕೆಲಸ! ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಪ್ರತಿ ಬಾರಿಯಂತೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಮುಖ್ಯಮಂತ್ರಿ  ಸಿದ್ದರಾಮಯ್ಯನವರಿಗೆ ಹವ್ಯಾಸವಾಗಿಬಿಟ್ಟಿದೆ.

ಇದು ಪ್ರಗತಿಪರ ಬಜೆಟ್ ಅಲ್ಲ, ಇದು ಕರ್ನಾಟಕದ ಪಾಲಿಗೆ ಮತ್ತೊಂದು ಪೊಳ್ಳು ಭರವಸೆಯ ಬಜೆಟ್. ಕಾಂಗ್ರೆಸ್ ಅಧಿಕಾರಕ್ಕೆ ಬಂದ 3 ವರ್ಷದಿಂದ ರಾಜ್ಯದ ಪ್ರಗತಿ ರಥಕ್ಕೆ ಹಾಕಿರುವ ಬ್ರೇಕ್ ಅನ್ನು ಈ ಬಾರಿಯೂ ತೆಗೆದಿಲ್ಲ ಅನ್ನುವುದೇ ವಾಸ್ತವ! ಎಂದು ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ.

- Advertisement - 

 

 

 

 

Share This Article
error: Content is protected !!
";