ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2026-27 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಚಿತ್ರದುರ್ಗಕ್ಕೆ ತಾರಾಲಯ ಸ್ಥಾಪನೆಗೆ 4 ಕೋಟಿ ಮೀಸಲು ಇಟ್ಟಿರುವುದು ನಿಜಕ್ಕೂ ಪ್ರಶಂಸನೀಯ.
ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಜನಸಾಮಾನ್ಯರಿಗೆ ಖಗೋಳ ವಿಜ್ಞಾನದಲ್ಲಿ ಆಸಕ್ತಿ ಹೆಚ್ಚಿಸಲು, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಸಹಾಯಕವಾಗುವುದು. ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚು ಉತ್ಸಾಹ ತುಂಬಲು ಅನುಕೂಲ.
ಹೆಚ್.ಎಸ್.ಟಿ.ಸ್ವಾಮಿ, ಹವ್ಯಾಸಿ ಖಗೋಳ ವೀಕ್ಷಕ ಹಾಗೂ ಕಾರ್ಯದರ್ಶಿ, ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಚಿತ್ರದುರ್ಗ.

