ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಕೊಡುತ್ತೇವೆ ಎಂದು ಬೊಗಳೆ ಬಿಟ್ಟು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಇಂದು “ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ”ಎಂಬ ಸ್ಥಿತಿ ನಿರ್ಮಿಸಿದ್ದಾರೆ.
ಜನರ ಕೆಂಗಣ್ಣಿಗೆ ಗುರಿಯಾಗಿ ಮುಜುಗರಕ್ಕೀಡಾಗುವ ಪರಿಸ್ಥಿತಿ ಬಂದಾಗಲೆಲ್ಲ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜನರನ್ನು ದಿಕ್ಕು ತಪ್ಪಿಸುವ ಚಾಳಿಯನ್ನು ಬಜೆಟ್‌ನಲ್ಲೂ ಸಿದ್ದರಾಮಯ್ಯನವರು ಪ್ರದರ್ಶನ ಮಾಡಿದ್ದಾರೆ.
ರಾಜ್ಯದ ಆರ್ಥಿಕ ಭವಿಷ್ಯಕ್ಕೆ ಸ್ಪಷ್ಟ ದಿಕ್ಕು ನೀಡಬೇಕಾದ ಬಜೆಟ್‌ನಲ್ಲಿ ವಾಸ್ತವ ಸ್ಥಿತಿಗತಿಗಳನ್ನು ಪ್ರಾಮಾಣಿಕವಾಗಿ ಹೇಳುವ ಬದಲು ಕಟ್ಟು ಕಥೆಗಳನ್ನು ಹೇಳುತ್ತಾ ಕಾಲಹರಣ ಮಾಡಲಾಗಿದೆ.
ಕಾಂಗ್ರೆಸ್ ಸರ್ಕಾರದ ಸಾಲದ ಪ್ರಮಾಣ ಆರ್ಥಿಕ ನಿರ್ವಹಣೆಯ ನಿಜ ಮುಖ ಬಯಲಿಗೆಳೆಯುತ್ತದೆ ಎಂದು ವಾಣಿಜ್ಯೋದ್ಯಮಿ, ಬಿಜೆಪಿ ಯುವ ಮುಖಂಡ ಅನೀತ್ ಕುಮಾರ್ ಜಿ ಎಸ್ ಟೀಕಿಸಿದ್ದಾರೆ.

