ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿ ಬೆಂಗಳೂರಿನ ಸ್ವದೇಶಿ ವಿಜ್ಞಾನ ಆಂದೋಳನ-ಕರ್ನಾಟಕ ವತಿಯಿಂದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರಿಗೆ ‘ಭಾರತರತ್ನ ಡಾ. ಸಿ.ಎನ್.ಆರ್. ರಾವ್ ವಿಜ್ಞಾನ ಪುರಸ್ಕಾರ-2026′ ಪ್ರದಾನ ಮಾಡಲಾಯಿತು.
ಉನ್ನತ ಶಿಕ್ಷಣ ಕ್ಷೇತ್ರ, ಸಂಶೋಧನೆ ಮತ್ತು ಶೈಕ್ಷಣಿಕ ಆಡಳಿತದಲ್ಲಿನ ಅಪಾರ ಅನುಭವ ಹಾಗೂ ದೃಢನಾಯಕತ್ವದ ಮೂಲಕ ವಿಶ್ವವಿದ್ಯಾನಿಲಯದ ಅಭಿವೃದ್ಧಿಗೆ ಕಾರಣರಾದ ಅವರಿಗೆ ಸ್ವದೇಶಿ ವಿಜ್ಞಾನ ಆಂದೋಲನದ ಅಧ್ಯಕ್ಷ ಡಾ. ಎಂ. ಎಸ್. ಜೋಗಾದ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಡಾ. ವೈ.ಎಸ್. ಗಾಯತ್ರಿ ಪ್ರಶಸ್ತಿ ಫಲಕ ವಾಚಿಸಿದರು. ಬಾಬುರಾವ್ ದನಿಸೆಕ್, ಕನ್ನಡ ವಿಜ್ಞಾನ ಸಭೆಯ ಆಯೋಜಕ ಸಂತೋಷ್, ಕರಾಮುವಿ ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್.ಕೆ, ಶೈಕ್ಷಣಿಕ ಡೀನ್ ಪ್ರೊ. ರಮಾನಾಥಂನಾಯ್ಡು, ಹಣಕಾಸು ಅಧಿಕಾರಿ ಡಾ. ನಿರಂಜನ್ ರಾಜ್ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಉಪಸ್ಥಿತರಿದ್ದರು.

