ಚಂದ್ರವಳ್ಳಿ ನ್ಯೂಸ್, ಹೈದರಾಬಾದ್:
ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮಾತನಾಡಿ, ಬೆಂಗಳೂರು ಟ್ರಾಫಿಕ್ ಮತ್ತು ಮುಂಬೈ-ಚೆನ್ನೈ ಮೂಲ ಸೌಕರ್ಯಗಳ ಕುರಿತು ವ್ಯಂಗ್ಯವಾಡಿದ್ದಾರೆ.
ಬೆಂಗಳೂರು ನಗರ ಟ್ರಾಫಿಕ್ ಜಾಮ್‌ಗೆ ಹೆಸರುವಾಸಿಯಾಗಿದೆ. ಐಟಿ ಸಿಟಿ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರಿನ ಇಂದಿನ ಸ್ಥಿತಿ ಏನಾಗಿದೆ ನೋಡಿ? ಅಲ್ಲಿನ ಜನ ಟ್ರಾಫಿಕ್‌ನಿಂದ ಹೈರಾಣಾಗಿದ್ದಾರೆ.
ಆದರೆ ನಮ್ಮ ಹೈದರಾಬಾದ್‌ನಲ್ಲಿ ಅಂತಹ ಪರಿಸ್ಥಿತಿ ಇಲ್ಲ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.
ಚೆನ್ನೈ ಮತ್ತು ಮುಂಬೈ ನಗರಗಳು ಹೇಗೆ ಸ್ಥಗಿತಗೊಳ್ಳುತ್ತವೆ ಎಂಬುದನ್ನು ಪ್ರಸ್ತಾಪಿಸಿದ ಅವರು, ಹೈದರಾಬಾದ್ ಅಂತಹ ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲ ಎಂದು ಪ್ರತಿಪಾದಿಸಿದರು.
ಹೈದರಾಬಾದ್ ಅನ್ನು ಮಾಲಿನ್ಯ ಮುಕ್ತ ನಗರವನ್ನಾಗಿ ಮಾಡುತ್ತೇವೆ. ನಮಗೆ ಬೆಂಗಳೂರು ಅಥವಾ ಮುಂಬೈ ನಗರಗಳು ಸ್ಪರ್ಧಿಯಲ್ಲ. ನಮ್ಮ ಸ್ಪರ್ಧೆ ಏನಿದ್ದರೂ ಸಿಂಗಾಪುರ ಮತ್ತು ಟೋಕಿಯೋದಂತಹ ಜಾಗತಿಕ ನಗರಗಳ ಜೊತೆಗೆ ಎಂದು ಸಿಎಂ ರೇವಂತ್ ರೆಡ್ಡಿ ಘೋಷಿಸಿದ್ದಾರೆ.

