ಕುಡಿಯುವ ನೀರಿನ ಸಮಸ್ಯೆಗೆ ಮಕ್ಕಳ ಪತ್ರಕ್ಕೆ 499 ಕೋಟಿ ಮೀಸಲಿಟ್ಟ ಸಿದ್ದರಾಮಯ್ಯ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ‌ಸಮಸ್ಯೆ ಕುರಿತು ಕೆಲವು ಸಮಯದ ಹಿಂದೆ ಮಕ್ಕಳು ಪತ್ರ ಬರೆದು
, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ ನನ್ನಲ್ಲಿ ಮನವಿ ಮಾಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಕ್ಕಳ ಕೋರಿಕೆಯ ಮೇರೆಗೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದಾಗ‌ಆ ಹಳ್ಳಿಗೆ ಸಮರ್ಪಕ ನೀರಾವರಿ ಯೋಜನೆಯೊಂದರ ಅಗತ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಈ ಸಾಲಿನ ಬಜೆಟ್ ನಲ್ಲಿ “ಉಡುತೊರೆಹಳ್ಳ ನೀರಾವರಿ ಯೋಜನೆ”ಯನ್ನು ಘೋಷಿಸಿ, 490 ಕೋಟಿ ಅನುದಾನ ಸಹ ಮೀಸಲಿಟ್ಟಿದ್ದೇನೆ ಎಂದು ಸಿಎಂ ತಿಳಿಸಿದರು. 

- Advertisement - 

ಅಹವಾಲು ಸಲ್ಲಿಸಿದ ಮಕ್ಕಳ ಧ್ವನಿ ಎಳೆಯದಾದರೂ, ಅದನ್ನು ಕಡೆಗಣಿಸದೆ ಮುಕ್ತವಾಗಿ‌ಆಲಿಸಿ, ಸಕಾರಾತ್ಮಕವಾಗಿ ಸ್ಪಂದಿಸುವ ತಾಯಿಯ ಹೃದಯ ನಮ್ಮ ಸರ್ಕಾರದ್ದು. ಪುಟಾಣಿ ಮಕ್ಕಳ‌ಧನ್ಯವಾದವನ್ನು ಅತ್ಯಂತ ಪ್ರೀತಿಯಿಂದ ಸ್ವೀಕರಿಸಿದ್ದೇನೆ.

ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ, ನನ್ನ ಮತ್ತು ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ತಮ್ಮ ಕಷ್ಟವನ್ನು ನಮ್ಮ ಗಮನಕ್ಕೆ ತಂದು, ಇಂದು ಸಾವಿರಾರು ಕುಟುಂಬಗಳ ಭವಿಷ್ಯ ಬದಲಾಗಲು ಕಾರಣರಾದ ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement - 

 

Share This Article
error: Content is protected !!
";