ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಹವ್ಯಕ ಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ‘ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ‘ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪಾಲ್ಗೊಂಡಿದ್ದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿಎ ಸರ್ಕಾರ ಜಾರಿಗೆ ತಂದಿರುವ ಮಹಿಳಾ ಕೇಂದ್ರಿತ ಯೋಜನೆಗಳು ಇಂದು ಕೋಟ್ಯಂತರ ತಾಯಂದಿರ ಮತ್ತು ಸಹೋದರಿಯರ ಬದುಕಿನಲ್ಲಿ ಪರಿವರ್ತನೆಯುಂಟುಮಾಡಿದೆ, ಹೊಸ ಭರವಸೆ ಮೂಡಿಸಿವೆ. ಸ್ತ್ರೀಶಕ್ತಿಯ ಸಬಲೀಕರಣವೇ ವಿಕಸಿತ ಭಾರತದ ಸಂಕಲ್ಪಕ್ಕೆ ಅಡಿಪಾಯವಾಗಿದ್ದು, ಮಹಿಳೆಯರ ಸರ್ವತೋಮುಖ ಏಳಿಗೆಗೆ ನಮ್ಮ ಪಕ್ಷ ಸದಾ ಬದ್ಧವಾಗಿದೆ ಎಂದು ವಿಜಯೇಂದ್ರ ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ, ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ.ಅಶ್ವಥ್ ನಾರಾಯಣ್, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಸೇರಿದಂತೆ ಹಲವಾರು ಪ್ರಮುಖರು, ಮಹಿಳಾ ಮುಖಂಡರು ಉಪಸ್ಥಿತರಿದ್ದರು.

