ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕರ್ನಾಟಕದ ಎಂಟು ಮಂದಿ-ಡಾ.ಪ್ರಭಾ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕಾರಣದಿಂದ ಕರ್ನಾಟಕದ ಎಂಟು ಮಂದಿ ಭಾರತೀಯ ಪ್ರವಾಸಿಗರು ಹಳೆಯ ದೋಹಾ ಬಂದರಿನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಅವರ ಸುರಕ್ಷಿತ ಮರಳಿಗಾಗಿ ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ತಕ್ಷಣ ಮಧ್ಯಪ್ರವೇಶ ಮಾಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ವಿದೇಶಾಂಗ ಸಚಿವರಾದ ಡಾ. ಸುಬ್ರಹ್ಮಣ್ಯಂ ಜೈಶಂಕರ್ ಅವರಿಗೆ ಸಂಸದೆ ಪ್ರಭಾ ಮನವಿ ಮಾಡಿದ್ದಾರೆ.

- Advertisement - 

ಸಂಬಂಧಿತ ರಾಯಭಾರಿ ಕಚೇರಿ ಅಧಿಕಾರಿಗಳಿಗೆ ಸೂಚನೆ ನೀಡಿ, ಪ್ರವಾಸಿಗರನ್ನು ಶೀಘ್ರದಲ್ಲಿ ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಕ್ರಮ ಕೈಗೊಳ್ಳುವಂತೆ ಡಾ.ಪ್ರಭಾ ವಿನಂತಿಸಿದ್ದಾರೆ.

- Advertisement - 
Share This Article
error: Content is protected !!
";