ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಡುಪಿ ಜಿಲ್ಲೆಯಲ್ಲಿ 26 ಅಂಗನವಾಡಿ ಕಾರ್ಯಕರ್ತೆ ಹಾಗೂ 132 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇರುತ್ತವೆ. ಇದರಲ್ಲಿ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿ ಹುದ್ದೆಗಳ ಆನ್ ಲೈನ್ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿ ಹೊರಡಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ತಿಳಿಸಿದರು.

ವಿಧಾನಸಭಾ ಪ್ರಶ್ನೋತ್ತರ ವೇಳೆಯಲ್ಲಿ ಕಾಪು ವಿಧಾನಸಭಾ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವು ಆನ್ ಲೈನ್ ತಂತ್ರಾಂಶ ಅಭಿವೃದ್ಧಿ ಪಡಿಸಿದ್ದು, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದರು.

- Advertisement - 

Share This Article
error: Content is protected !!
";