ನವೀನ್ ಕುಮಾರ್ ಬಿ.ಎನ್. ರವರಿಗೆ ಪಿಎಚ್.ಡಿ ಪದವಿ ಪ್ರದಾನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬಾಗೇಪಲ್ಲಿ:
(ಭಾಗ್ಯನಗರ) ತಾಲೂಕಿನ ಬೋಡಿಕದಿರೇಪಲ್ಲಿ ಗ್ರಾಮದ ನರಸಮ್ಮ ಮತ್ತು  ನರಸಿಂಹಪ್ಪ ಬಿ. ದಂಪತಿಯ ಕಿರಿಯ ಪುತ್ರ
, ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯ ಗಣಿತ ಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ನವೀನ್ ಕುಮಾರ್ ಬಿ.ಎನ್. ರವರಿಗೆ ಪಿಎಚ್.ಡಿ ಪದವಿ ಲಭಿಸಿದೆ.

ಗಣಿತ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಹರಿಣ ಪಿ. ವಾಘಮೋರೆ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಎ ಸ್ಟಡಿ ಆನ್ ಕಾಂಟ್ರಿಬ್ಯೂಷನ್ಸ್ ಟು ನೆವನ್ಲಿನ್ನಾ ಥಿಯರಿಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement - 

ಪ್ರಸ್ತುತ ನವೀನ್ ಕುಮಾರ್ ಬಿ.ಎನ್. ಅವರು ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ರಾಮನಗರ ಸ್ನಾತಕೋತ್ತರ ಕೇಂದ್ರದ ಗಣಿತ ಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಇವರ ಶೈಕ್ಷಣಿಕ ಸಾಧನೆಗಾಗಿ ನವೀನ್ ಕುಮಾರ್ ಬಿ. ಎನ್. ರವರಿಗೆ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಮತ್ತು ಬೋಡಿಕದಿರೇಪಲ್ಲಿ ಗ್ರಾಮದ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಸೇರಿ ಶುಭ ಕೋರಿ ಅಭಿನಂದನೆ ಸಲ್ಲಿಸಿದ್ದಾರೆ.

- Advertisement - 

 

Share This Article
error: Content is protected !!
";