ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಮನುಷ್ಯ ಆಧ್ಯಾತ್ಮಿಕ ಚಿಂತನೆಗಳನ್ನು ಬೆಳೆಸಿಕೊಳ್ಳುವುದರಿಂದ ಆರೋಗ್ಯಕರ ಮನಸ್ಸನ್ನು ಪಡೆಯುತ್ತಾನೆ ಎಂದು ಚಳ್ಳಕೆರೆಯ ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಸದಸ್ಯರಾದ ಶ್ರೀಮತಿ ತಿಪ್ಪಮ್ಮ ಉಮಾಶಂಕರ್ ತಿಳಿಸಿದರು.
ನಗರದ ತ್ಯಾಗರಾಜನಗರದ ಸದ್ಭಕ್ತರಾದ ಸುವರ್ಣ ನಾಗರಾಜ್ ಅವರ ಮಾತೃಶ್ರೀ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಆರೋಗ್ಯಕರ ಮನಸ್ಸು” ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿದರು.
ಸತ್ಸಂಗದ ಪ್ರಯುಕ್ತ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ, ಶ್ರೀರಾಮಕೃಷ್ಣರ ನಾಮಸ್ಮರಣೆ, ವಿಶೇಷ ಭಜನೆ, ಯತೀಶ್ ಎಂ ಸಿದ್ದಾಪುರ ಅವರಿಂದ “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ, ದಿವ್ಯತ್ರಯರಿಗೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು.
ಸತ್ಸಂಗ ಸಭೆಯಲ್ಲಿ ಎಚ್ ಲಕ್ಷ್ಮೀದೇವಮ್ಮ, ಸುವರ್ಣ ನಾಗರಾಜ್ , ಅನ್ನಪೂರ್ಣ, ಮಂಜುಳಾ, ಪುಷ್ಪ, ಸುನೀತಾ, ಮಾಕಂಸ್ ಲಕ್ಷ್ಮೀ ಬಾಲಾಜೀ, ರತ್ನಮ್ಮ ಜಯಚಂದ್ರ, ಗೀತಾ ಪ್ರಕಾಶ್, ಅನುಸೂಯ ರಾಘವೇಂದ್ರ, ಗೀತಾ ಸುಂದರೇಶ್ ದೀಕ್ಷಿತ್, ಪ್ರಮೀಳಾ ಜಗದೀಶ್, ಎಂ ಲಕ್ಷ್ಮೀದೇವಮ್ಮ, ಸರಸ್ವತಿ ರಾಜು, ಸರಸ್ವತಿ ನಾಗರಾಜ್, ಸರ್ವಮಂಗಳಾ ಶಿವಣ್ಣ ಉಪಸ್ಥಿತರಿದ್ದರು.

