ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೀದರ್ ಜಿಲ್ಲೆಯಲ್ಲಿ 23 ಬಾಲಕಿಯರ ಹಾಗೂ 55 ಬಾಲಕರ ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿದ್ದು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಾಗೂ 35 ಬಾಲಕರ ವಿದ್ಯಾರ್ಥಿನಿಲಯಗಳಿಗೆ ಸಿ.ಸಿ.ಕ್ಯಾಮರಾ ಅಳವಡಿಸಲಾಗಿದ್ದು, ಉಳಿದ 20 ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಅನುದಾನದ ಲಭ್ಯತೆಯನುಸಾರ ಸಿ.ಸಿ.ಕ್ಯಾಮರಾ ಅಳವಡಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ಶಿವರಾಜ ಎಸ್.ತಂಗಡಗಿ ತಿಳಿಸಿದರು.
ವಿಧಾನಪರಿಷತ್ತಿನ ಅಧಿವೇಶನದಲ್ಲಿಂದು ಸದಸ್ಯರಾದ ಡಾ.ಎಂ.ಜಿ.ಮುಳೆ ಅವರ ಪ್ರಶ್ನೆಗೆ ಉತ್ತಿರಿಸಿದ ಸಚಿವರು, ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿಗಾಗಿ ವಾಟರ್ ಪ್ಯೂರಿಫೈರ್ ವ್ಯವಸ್ಥೆ ಕಲ್ಪಿಸಲಾಗಿದೆÀ 100 ಸಂಖ್ಯಾ ಬಲದ ಒಂದು ವಿದ್ಯಾರ್ಥಿನಿಲಯದ ರ್ನಿಹಣೆಗೆ ಒಂದು ನಿಲಯ ಮೇಲ್ವಿಚಾರಕರು / ನಿಲಯಪಾಲಕರು, ಎರಡು ಅಡುಗೆಯವರು, 3 ಅಡುಗೆ ಸಹಾಯಕರು ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ರಾತ್ರಿ ಕಾವಲುಗಾರರನ್ನು ನೇಮಿಸಲಾಗಿದೆ ಎಂದರು.
ಬೀದರ್ ಜಿಲ್ಲೆಯಲ್ಲಿ 54 ವಿದ್ಯಾರ್ಥಿನಿಲಯಗಳಿಗೆ ಹೊಸ ಕಟ್ಟಡಗಳ ನಿರ್ಮಾಣಗಳನ್ನು ಕೈಗೊಳ್ಳಲಾಗಿದ್ದು, ನಿರ್ಮಾಣ ಕಾರ್ಯವು ಪ್ರಗತಿಯ ಹಂತದಲ್ಲಿದೆ. 37 ವಿದ್ಯಾರ್ಥಿನಿಲಯಗಳ ಕಟ್ಟಡ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು ರೂ.400.18 ಲಕ್ಷಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಮಂಜೂರಾತಿ ನೀಡಿದೆ ಎಂದರು.

