ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡ ಸದಸ್ಯರು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರು ಭಾಗವಹಿಸಿದ್ದರು.

ಪಕ್ಷ ಸಂಘಟನೆ, ರಾಜ್ಯದಲ್ಲಿ ಮುಂದೆ ಬರಲಿರುವ ಉಪಚುನಾವಣೆ ಹಾಗೂ ವಿಧಾನ ಪರಿಷತ್ತಿನ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗಾಗಿ ನಡೆಸಬೇಕಾದ ಕಾರ್ಯತಂತ್ರಗಳು ಸೇರಿದಂತೆ ಹಲವಾರು ಮಹತ್ವಪೂರ್ಣ ವಿಷಯಗಳ ಬಗ್ಗೆ ಚರ್ಚಿಸುವ ಸಲುವಾಗಿ ಬೆಂಗಳೂರಿನ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದರು.

- Advertisement - 

ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಪಕ್ಷದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಶಾಸಕ ಸಿ.ಟಿ ರವಿ, ಸಂಸದ ಗೋವಿಂದ ಕಾರಜೋಳ, ಶಾಸಕ ಡಾ.ಸಿ. ಎನ್.ಅಶ್ವಥ್ ನಾರಾಯಣ್, ಮಾಜಿ ಸಚಿವ ಶ್ರೀರಾಮುಲು, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಉಪಸ್ಥಿತರಿದ್ದರು.

 

- Advertisement - 

 

 

Share This Article
error: Content is protected !!
";