ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಖೇಲೋ ಇಂಡಿಯಾ! ವೈಬ್ರೆಂಟ್ ಮಂಡ್ಯ!!
ಮಂಡ್ಯದ ವಿ.ಸಿ. ಫಾರಂನಲ್ಲಿ 14 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಬಹುಪಯೋಗಿ ನೂತನ ಕ್ರೀಡಾಂಗಣಕ್ಕೆ ಕೇಂದ್ರ ಸರಕಾರದ ಯುವಜನ ಸಬಲೀಕರಣ, ಕ್ರೀಡೆ ಮತ್ತು ಕಾರ್ಮಿಕ ಖಾತೆ ಮಂತ್ರಿ ಮನ್ಸುಖ್ ಮಾಂಡವಿಯಾ ಅವರು ಶಂಕುಸ್ಥಾಪನೆ ನೆರವೇರಿಸಿದರು.
14 ಕೋಟಿ ರೂ. ವೆಚ್ಚದ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿರುವುದು ಅತೀವ ಸಂತೋಷ ಉಂಟು ಮಾಡಿದ ಸಂದರ್ಭವಿದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಮೇಲುಕೋಟೆ ವಿಧಾನಸಭೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕೆ.ಆರ್. ಪೇಟೆ ಶಾಸಕ ಮಂಜುನಾಥ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಜಿಲ್ಲೆಯ ಉನ್ನತ ಅಧಿಕಾರಿಗಳು ಈ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾದರು ಎಂದು ಕುಮಾರಸ್ವಾಮಿ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಸಶಕ್ತ, ಸಮರ್ಥ, ಬಲಿಷ್ಠ ಹಾಗೂ ಆರೋಗ್ಯವಂತ ಭಾರತ ನಿರ್ಮಾಣದ ಕನಸು ಹೊಂದಿದ್ದು, ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಕಾರ್ಯೋನ್ಮುಖರಾಗಿ ಕೆಲಸ ಮಾಡುತ್ತಿದ್ದೇವೆ.
ಸಕ್ಕರೆನಾಡಿಗೆ ಬಂದು ಈ ಕಾರ್ಯಕ್ರಮವನ್ನು ಚಿರಸ್ಮರಣೀಯಗೊಳಿಸಿದ ಸಂಪುಟದ ಸಹೋದ್ಯೋಗಿಗಳಲಾದ ಮನ್ಸುಖ್ ಮಾಂಡವೀಯ ಅವರಿಗೆ ಅನಂತ ಧನ್ಯವಾದಗಳು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.

