ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಲ್ಲೇಶ್ವರದ ಜಗನ್ನಾಥ ಭವನದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಸಂಬಂಧಿಸಿದ ಕಚೇರಿಯನ್ನು ಉದ್ಘಾಟಿಸಿ, ಬಳಿಕ ನಡೆದ ರಾಜ್ಯ ಕಾರ್ಯಾಗಾರದಲ್ಲಿ ಎಸ್.ಐ.ಆರ್ ಕಾರ್ಯಾಚರಣೆಯ ಕುರಿತು ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಕಾರ್ಯಾಗಾರದಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಎಸ್.ಐ.ಆರ್ ಕರ್ನಾಟಕ–ತೆಲಂಗಾಣ ಪ್ರಭಾರಿ ಅಲ್ಕಾ ಗುರ್ಜರ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಮಾಜಿ ರಾಜ್ಯ ಕಾರ್ಯದರ್ಶಿ ಹಾಗೂ ಎಸ್.ಐ.ಆರ್ ರಾಜ್ಯ ತಂಡದ ಸಂಚಾಲಕ ಜಗದೀಶ್ ಹಿರೇಮನಿ ಮತ್ತು ಎಸ್.ಐ.ಆರ್ ರಾಜ್ಯ ತಂಡದ ಸದಸ್ಯರು ಉಪಸ್ಥಿತರಿದ್ದರು.
ಎಸ್.ಐ.ಆರ್ ಸಂದರ್ಭದಲ್ಲಿ ವಹಿಸಬೇಕಾದ ಮುಂಜಾಗ್ರತೆಗಳ ಕುರಿತು ಕಾರ್ಯಾಗಾರದಲ್ಲಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಯಿತು ಎಂದು ಅಶೋಕ್ ಹೇಳಿದರು.

