ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೈತರ ಸಂಕಷ್ಟಕ್ಕೆ ಸದಾ ಮಿಡಿಯುವ ರೈತರ ಪಕ್ಷ ಜನತಾದಳ ಜಾತ್ಯತೀತ!
ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ರಾಜ್ಯದ ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದ್ದಾರೆ ಎಂದು ಜೆಡಿಎಸ್ ಹರ್ಷ ವ್ಯಕ್ತಪಡಿಸಿದೆ.
ತಂಬಾಕು ದರ ಕುಸಿತ ವಿಚಾರವಾಗಿ, ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಅವರ ಉಪಸ್ಥಿತಿಯಲ್ಲಿ, ರಾಜ್ಯ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಪಿಯೂಷಿ ಗೋಯಲ್ ಅವರೊಂದಿಗೆ ರಾಜ್ಯದಲ್ಲಿ ತಂಬಾಕು ಬೆಳೆಯುವ ಪ್ರದೇಶಗಳ ಜನಪ್ರತಿನಿಧಿಗಳೊಂದಿಗೆ ಅತ್ಯಂತ ಫಲಪ್ರದ ಮಾತುಕತೆ ನಡೆಸಿದರು.
ಶೀಘ್ರ ತಂಬಾಕು ಖರೀದಿ ಮಾಡುವುದು, ವಿದೇಶಿ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆ ಸೇರಿದಂತೆ ರಾಜ್ಯದ ಬೆಳೆಗಾರರ ಹಲವಾರು ಪ್ರಮುಖ ಮನವಿಗಳಿಗೆ ಕೇಂದ್ರ ಸಚಿವರಾದ ಪಿಯೂಷಿ ಗೋಯಲ್ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿ, ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ತಂಬಾಕು ಖರೀದಿಸುವ ಉದ್ಯಮದ ಪ್ರಮುಖರ ಜತೆ ಚರ್ಚಿಸಿ, ಬೆಳೆಗಾರರ ನೆರವಿಗೆ ಧಾವಿಸಿ ಬರುವಂತೆ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ಸಾ.ರಾ. ಮಹೇಶ್, ಮೈಸೂರು – ಕೊಡಗು ಸಂಸದರಾದ ಯಧುವೀರ್ ಒಡೆಯರ್, ಶಾಸಕರಾದ ಎ. ಮಂಜು, ಜಿ.ಡಿ. ಹರೀಶ್ ಗೌಡ, ಸಿ.ಎನ್. ಮಂಜೇಗೌಡ, ಕೋಲಾರ ಸಂಸದ ಮಲ್ಲೇಶ್ ಬಾಬು, ಮಾಜಿ ಶಾಸಕರಾದ ಮಹದೇವು, ಅಶ್ವಿನ್ ಕುಮಾರ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರಾದ ಕೃಷ್ಣನಾಯಕ್ ಅವರು ಭಾಗಿಯಾಗಿದ್ದರು.

