ಲೋಕ್ ಅದಾಲತ್ ನಲ್ಲಿ ಒಂದಾದ ದಂಪತಿಗಳು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಆದಾಲತನಲ್ಲಿ ವಿವಿಧ ರೀತಿಯ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು.

ತಾಲೂಕಿನ ವಿವಿಧ ನ್ಯಾಯಾಲಯಗಳ ಒಟ್ಟು  3737 ಪ್ರಕರಣಗಳನ್ನು ಕೈ ಗೆತ್ತಿಕೊಳ್ಳಲಾಗಿದ್ದು, 1593 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದ್ದು, 1.64 ಕೋಟಿ ರೂಗಳ ಹಣವನ್ನು ಒಪ್ಪಂದ ಮಾಡಿಕೊಳ್ಳಲಾಗಿದೆ  ಎಂದು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ  ಸದಸ್ಯ ಕಾರ್ಯ ದರ್ಶಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ತಿಳಿಸಿದ್ದಾರೆ.

- Advertisement - 

ಒಂದಾದ ದಂಪತಿಗಳು :
ಅದಾಲತ್ನಲ್ಲಿ 45 ವೈವಾಹಿಕ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, ಇದರಲ್ಲಿ 6 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಕೌಟುಂಬಿಕ ಪ್ರಕರಣಗಳಲ್ಲಿ ದೂರವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಗಂಡ-ಹೆಂಡತಿಯನ್ನು ರಾಜೀ ಸಂಧಾನದ ಮೂಲಕ ಒಂದು ಗೂಡಿಸಲಾಯಿತು. ಇಬ್ಬರು ದಂಪತಿಗಳು ನವ ವಧು- ವರರಂತೆ ಪರಸ್ಪರ ಹೂಮಾಲೆಗಳನ್ನು ಹಾಕಿಕೊಳ್ಳುವ ಮೂಲಕ ಒಂದಾದರು.

ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ ನಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿಲ್ಪ.ಎಚ್.ಎ ರವರ ಸಮ್ಮುಖದಲ್ಲಿ  2013 ರಲ್ಲಿ ವಿವಾಹವಾಗಿದ್ದ ಗಾಯಿತ್ರಿ ಮತ್ತು ಶಂಕರಪ್ಪ ಎಂಬ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದು ಇವರು 2023ರಲ್ಲಿ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದರು.  ನ್ಯಾಯಾಧೀಶರ ಸಮ್ಮುಖದಲ್ಲಿ ಈ ದಂಪತಿಗಳು ಒಂದಾದರು.

- Advertisement - 

ಸಮಾಜದಲ್ಲಿ ಸಾಮರಸ್ಯವನ್ನು ಕಾಪಾಡುವಲ್ಲಿ ಕುಟುಂಬಗಳು ಮಹತ್ತರ ಪಾತ್ರವನ್ನು ವಹಿಸುತ್ತವೆ ಸಮಾಜ ಸದೃಢವಾಗಿ ಇರಬೇಕೆಂದರೆ ಕುಟುಂಬಗಳು ನೆಮ್ಮದಿಯಿಂದ ಬಾಳಬೇಕು ಎಂದು ನ್ಯಾಯಾಧೀಶರಾದ ಶಿಲ್ಪ.ಎಚ್.ಎ ತಿಳಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನ ಕಿರಿಯ ನ್ಯಾಯಾಲಯದ ನ್ಯಾಯಾಧೀಶರಾದ ದಾಸರಿಕ್ರಾಂತಿ ಕಿರಣ್ ರವರು ಎರಡು ಕುಟುಂಬಗಳನ್ನು ಒಂದುಗೂಡಿಸಿದರು.

ಈ ವೇಳೆ ಒಂದನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್.ಆರ್.ಜೆ.ಎಸ್, ಪ್ರಧಾನ ಕಿರಿಯ ನ್ಯಾಯಾಲಯದ ನ್ಯಾಯಾಧೀಶರಾದ ದಾಸರಿಕ್ರಾಂತಿ ಕಿರಣ್, ಕಿರಿಯ ಶ್ರೇಣಿ ನ್ಯಾಯಾಧೀಶರಾದ ಪ್ರೀತಿ.ಕೆ ಹಾಗೂ ರವಿ ಬೆಟೆಗಾರ್, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ರೇಣುಕಾ ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಕನಕ ರಾಜ್ ಉಪಾಧ್ಯಕ್ಷ ಕೆ.ಜಗನ್ನಾಥ್ಖಜಾಂಚಿ ಆರ್. ಗೀತಾ, ಜಂಟಿ ಕಾರ್ಯದರ್ಶಿ ನರಸಿಂಹಮೂರ್ತಿ ಮೊದಲಾದವರು ಹಾಜರಿದ್ದರು.

 

Share This Article
error: Content is protected !!
";