ಚಿತ್ರದುರ್ಗ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ಭಾರೀ ಅಕ್ರಮ 5 ಮಂದಿ ಬಂಧನ, ಓರ್ವ ಪರಾರಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಿಬ್ಬಂದಿ ಹಾಗೂ ಹೊರಗುತ್ತಿಗೆ ನೌಕರರ ವಿರುದ್ಧ ಕಾನೂನು ಕ್ರಮಕ್ಕಾಗಿ ಎಫ್ಐಆರ್ ದಾಖಲು ಮಾಡಲಾಗಿದೆ.​

ಜಿಲ್ಲಾಧಿಕಾರಿಯವರ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಹೊರಗುತ್ತಿಗೆ ನೌಕರರು ಸೇರಿ ಎಸಗಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಕೆಳಕಂಡ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 
​ಆರೋಪಿಗಳ ವಿವರ: 

- Advertisement - 

​ಎ-1: ಸೈಯದ್ ಸಾಧಿಕ್ ಡೇಟಾ ಎಂಟ್ರಿ ಆಪರೇಟರ್ (ಹೊರಗುತ್ತಿಗೆ), ಜಿಲ್ಲಾ ನಗರಾಭಿವೃದ್ಧಿ ಕೋಶ.
​ಎ-
2: ವೆಂಕಟೇಶ್ ಮಾಲೀಕರು, ವಿಎಂಹೆಚ್ ಎಂಟರ್ ಪ್ರೈಸಸ್ ಚಿತ್ರದುರ್ಗ.  ​ಎ-3: ವಿಜಯ್ ಕುಮಾರ್ ಫೈನಾನ್ಸ್ ಸ್ಪೆಷಲಿಸ್ಟ್ (ಹೊರಗುತ್ತಿಗೆ), ಜಿಲ್ಲಾ ನಗರಾಭಿವೃದ್ಧಿ ಕೋಶ.
​ಎ-
4: ವಿನಯ್ ಶರ್ಮ ಹೌಸಿಂಗ್ ಇಂಜಿನಿಯರ್ (ಹೊರಗುತ್ತಿಗೆ), ಜಿಲ್ಲಾ ನಗರಾಭಿವೃದ್ಧಿ ಕೋಶ.
​ಎ-
5: ಬಸವರಾಜ್ ಸಾಮಾಜಿಕ ತಜ್ಞರು (ಹೊರಗುತ್ತಿಗೆ), ಜಿಲ್ಲಾ ನಗರಾಭಿವೃದ್ಧಿ ಕೋಶ.
​ಎ-
6: ಮೆಹಬೂಬ್ ಭಾಷಾ ಎಫ್.ಡಿ.ಎ, ಜಿಲ್ಲಾ ನಗರಾಭಿವೃದ್ಧಿ ಕೋಶ, ಚಿತ್ರದುರ್ಗ. 

​ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲೇ ಇದ್ದುಕೊಂಡು ಕರ್ತವ್ಯ ಲೋಪ ಎಸಗಿರುವ ಹಾಗೂ ಖಾಸಗಿ ವ್ಯಕ್ತಿಗಳೊಂದಿಗೆ ಸೇರಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.
ಏನಿದು ಪ್ರಕರಣ:
ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಆರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.

- Advertisement - 

ನಗರಾಭಿವೃದ್ಧಿ ವಿಭಾಗದಲ್ಲಿ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮಹೆಬೂಬ್ ಭಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಎ1 ಆರೋಪಿ ಸೈಯದ್ ಪರಾರಿಯಾಗಿದ್ದು, ಇನ್ನುಳಿದ ಐವರನ್ನು ಬಂಧಿಸಿದ್ದಾರೆ.

ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಐವರು ಸಿಎಲ್‌ಟಿಸಿ ಸಿಬ್ಬಂದಿ 15 ಲಕ್ಷ ರೂ. ವೇತನದ ನಕಲಿ ಬಿಲ್ ಸೃಷ್ಟಿಸಿ, ಜಿಲ್ಲಾ ಖಜಾನೆಗೆ ಕಡತವನ್ನು ಕಳಿಸಿದ್ದರು. ಈ ವೇಳೆ ಸಹಿ ಬಗ್ಗೆ ಅನುಮಾನಗೊಂಡು ಖಜಾನೆ ಇಲಾಖೆಯಿಂದ ಆಕ್ಷೇಪಣೆ ಬಂದಿತ್ತು. ಈ ಹಿನ್ನಲೆಯಲ್ಲಿ ವಂಚನೆ ಬಯಲಾಗಿದ್ದು, ನಗರಾಭಿವೃದ್ಧಿ ಕೋಶದ ನಿರ್ದೇಶಕಿ ರೇಷ್ಮಾ ಹಾನಗಲ್ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಡಿಸಿ ಕಚೇರಿಯಲ್ಲಿ ಡಿಸಿ ಹಾಗೂ ಎಡಿಸಿ ಅವರಿಗೆ ಸಂಬಂಧಿತ ಡಿಎಸ್‌ಸಿ ಕೀ ಕಳ್ಳತನ ಮಾಡಿದ್ದಾರೆ ಎಂದು ನೌಕರ ಸೈಯದ್ ಸಾದಿಕ್ ವಿರುದ್ಧ ಕಳ್ಳತನ ಆರೋಪ ಕೇಳಿಬಂದಿದೆ. ಸದ್ಯ ಗುತ್ತಿಗೆ ನೌಕರರನ್ನು ಕೆಲಸದಿಂದ ವಜಾಗೊಳಿಸಿದ್ದು, ಓರ್ವ ಸರ್ಕಾರಿ ನೌಕರನನ್ನು ಅಮಾನತುಗೊಳಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

 

Share This Article
error: Content is protected !!
";