ಹಾವು ಕಚ್ಚಿ ಆಸ್ಪತ್ರೆಗೆ ಸೇರಿದ ವಿದ್ಯಾರ್ಥಿನಿ ಮತ್ತು ಮುಖ್ಯೋಪಾಧ್ಯಾಯರ ಆರೋಗ್ಯ ವಿಚಾರಿಸಿದ ರಘುಮೂರ್ತಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದ ಸಾರ್ವಜನಿಕ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ತುರುವನೂರು ಹೋಬಳಿಯ ಹುಣಸೇಕಟ್ಟೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಗೆ ನಾಗರ ಹಾವು ಕಚ್ಚಿ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ ಮತ್ತು ಮುಖ್ಯೋಪಾಧ್ಯಾಯರ ಆರೋಗ್ಯ ವಿಚಾರಿಸಿದರು.

ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಹುಣಸೇಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿಗೌಡ ಎಂಬ ವಿದ್ಯಾರ್ಥಿಗೆ ನಾಗರ ಹಾವು ಕಚ್ಚಿದ ಪರಿಣಾಮವಾಗಿ ಹಾಗೂ ಆ ವಿದ್ಯಾರ್ಥಿನಿಯನ್ನು ರಕ್ಷಿಸಿ ಸಮಯ ಪ್ರಜ್ಞೆ ಮೆರೆದು ತತಕ್ಷಣ ಪ್ರಥಮ ಚಿಕಿತ್ಸೆ ನೀಡಿ ವಿದ್ಯಾರ್ಥಿನಿಯ ಜೀವ ಉಳಿಸಿದ ಶಾಲೆಯ ಮುಖ್ಯೋಪಾಧ್ಯಾಯರಾದ ರವಿಶಂಕರ್ ಅವರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸ್ಥಳಕ್ಕೆ ಶಾಸಕ ರಘುಮೂರ್ತಿ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

- Advertisement - 

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬುರೆಡ್ಡಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";