ನ್ಯಾಯಾಧೀಶರ ಪ್ರಯತ್ನದಿಂದ ಮತ್ತೆ ಒಂದಾದ 37 ಜೋಡಿ ದಂಪತಿಗಳು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ವಿಚ್ಛೇದನಕ್ಕಾಗಿ ಬಂದಿದ್ದ
37 ದಂಪತಿಗಳು ಪರಸ್ಪರ ಹಾರ ಬದಲಿಸಿಕೊಂಡು ಮತ್ತೆ ಒಂದಾಗಿ ಬಾಳಲು ನಿರ್ಧಾರ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಆಯೋಜಿಸಲಾದ ಈ ಮಹತ್ವದ ವಿದ್ಯಾಮಾನಕ್ಕೆ ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಡಿ.ಕೆ.ವೇಲಾ ಅವರು ಶುಭ ಹಾರೈಸಿದ್ದಾರೆ.

- Advertisement - 

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನ್ಯಾಯಾಂಗ ಇಲಾಖೆಯ ಅಧಿಕಾರಿಯೊಬ್ಬರು, ಈ ಜಿಲ್ಲೆಯಲ್ಲಿ ನಡೆದಿರುವ ಎಲ್ಲಾ ರಾಷ್ಟ್ರೀಯ ಲೋಕ ಅದಾಲತ್‌ಗಳ ಜವಾಬ್ದಾರಿಯನ್ನು ನಿಭಾಯಿಸಿ, ಅಂದಾಜು 500 ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

 

- Advertisement - 

Share This Article
error: Content is protected !!
";