ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-2028 ರ ಸಾಲಿನ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಜ್ಯ ಚುನಾವಣೆ ನಡೆದ ಸಂಧರ್ಭದಲ್ಲಿ ರಾಜ್ಯಕಾರ್ಯಕಾರಿ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಒಂದು ಹುದ್ದೆ ಅವಿರೋಧವಾಗಿ ಆಯ್ಕೆಯಾಗಿತ್ತು.
ಉಳಿದ ಪದಾಧಿಕಾರಿಗಳ ಹುದ್ದೆಗೆ ಕೆಲ ನಾಮಪತ್ರ ತಿರಸ್ಕೃತವಾಗಿದ್ದರೆ, ಹಲವು ಹುದ್ದೆಗಳಿಗೆ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪತ್ರಕರ್ತರ ಸಭೆ ನಡೆಸಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ, ಕೆಯುಡಬ್ಲ್ಯೂಜೆ ರಾಜ್ಯ ಉಪಾಧ್ಯಕ್ಷರಾದ ಎಚ್.ಬಿ.ಮದನಗೌಡ ಅವರಿಗೆ ನೀಡಿ, ಕೆಯುಡಬ್ಲ್ಯೂಜೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿತ್ತು.
ಮುಖ್ಯಚುನಾವಣಾಧಿಕಾರಿ ರವಿಕುಮಾರ್ ಟೆಲೆಕ್ಸ್ ಅವರ ಸಲಹೆಯನ್ನು ಪಡೆದುಕೊಳ್ಳಲಾಗಿತ್ತು. ಈ ನಿಟ್ಟಿನಲ್ಲಿ ಚಿಕ್ಕಮಗಳೂರಿನಲ್ಲಿ ಸಭೆ ನಡೆಸಿ ಸದಸ್ಯರ ಸಹಮತದ ಮೇರೆಗೆ ಅನಿಲ್ ಎಚ್.ಎ. ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

