ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಾದ್ಯಂತ ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. 158ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 4,824 ಕೋಟಿ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಿಂದ ರಾಜ್ಯದಲ್ಲಿ ಸುಮಾರು 14,525 ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಹೂಡಿಕೆಯ ಪ್ರಮುಖ ಅಂಶಗಳು:
ಸರ್ಕಾರದ ಈ ನಿರ್ಧಾರದಿಂದ ರಾಜ್ಯದ 13 ಜಿಲ್ಲೆಗಳಲ್ಲಿ ಕೈಗಾರಿಕಾ ವಿಸ್ತರಣೆ ಹಾಗೂ 37 ಹೊಸ ಕೈಗಾರಿಕೆಗಳ ಸ್ಥಾಪನೆಗೆ ಚಾಲನೆ ಸಿಗಲಿದೆ ಎಂದು ಅವರು ತಿಳಿಸಿದರು.

