ತಾಂಡಾದ ಇಬ್ಬರು ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ವಿಜಯನಗರ(ಹೊಸಪೇಟೆ):
ಜಿಲ್ಲೆಯ​ ಹೂವಿನಹಡಗಲಿ ತಾಲೂಕಿನ ಲಿಂಗನಾಯಕನಹಳ್ಳಿ ತಾಂಡಾದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಜವಾಹರ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ.

​ತಾಂಡಾದ ನಿವಾಸಿಗಳಾದ ಆನಂದನಾಯ್ಕ ಅವರ ಪುತ್ರ ಮನೀಷ್ ರಾಠೋಡ್ ಹಾಗೂ ರಾಜಾನಾಯ್ಕ ಅವರ ಪುತ್ರ ವಿಷ್ಣು ರಾಠೋಡ್ ಅವರು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಈ ಸಾಧನೆ ಮಾಡಿದ್ದಾರೆ.

- Advertisement - 

​ಗ್ರಾಮೀಣ ಭಾಗದ ಮತ್ತು ಹಿಂದುಳಿದ ತಾಂಡಾದ ಇಬ್ಬರು ವಿದ್ಯಾರ್ಥಿಗಳು ಏಕಕಾಲಕ್ಕೆ ನವೋದಯದಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗೆ ಆಯ್ಕೆಯಾಗಿರುವುದು ತಾಂಡಾದಲ್ಲಿ ಸಂಭ್ರಮ ತಂದಿದೆ. ವಿದ್ಯಾರ್ಥಿಗಳ ಈ ಯಶಸ್ಸಿಗೆ ಅವರ ಪೋಷಕರು, ಶಿಕ್ಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

- Advertisement - 

 

Share This Article
error: Content is protected !!
";