ಚಂದ್ರವಳ್ಳಿ ನ್ಯೂಸ್,ದೊಡ್ಡಬಳ್ಳಾಪುರ:
ಸಾಯಿ ವಿದ್ಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕ ಉಮೇಶ್ ಆರ್. ಅವರು ಬೆಂಗಳೂರು ವಿಶ್ವವಿದ್ಯಾಲಯದ ನಿರ್ವಹಣಾ ವಿಭಾಗದ ನಿರ್ದೇಶಕರು ಹಾಗೂ
ಪ್ರಾಧ್ಯಾಪಕ ಡಾ. ವೈ. ನಾಗರಾಜು ಅವರ ಮಾರ್ಗದರ್ಶನದಲ್ಲಿ ನೇರ ಲಾಭ ವರ್ಗಾವಣೆ ಯೋಜನೆಗಳ ಮೂಲಕ ಬ್ಯಾಂಕ್ ಸೌಲಭ್ಯವಿಲ್ಲದವರಿಗೆ ಬ್ಯಾಂಕಿಂಗ್ ಸೇವೆ ಬೆಂಗಳೂರು ಗ್ರಾಮೀಣ ಜಿಲ್ಲೆಯಲ್ಲಿನ ಒಂದು ಅಧ್ಯಯನ ಎಂಬ ವಿಷಯ ಕುರಿತು ಮಂಡಿಸಿದ ಮಹಾ ಪ್ರಬಂಧ ಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿ.ಹೆಚ್.ಡಿ ಪದವಿ ನೀಡಿ ಗೌರವಿಸಿದೆ.
ಡಾಕ್ಟರೇಟ್ ಪದವಿಗೆ ಭಾಜನರಾದ ಡಾ. ಉಮೇಶ್ ಆರ್. ಅವರನ್ನು ಸಾಯಿ ವಿದ್ಯಾ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು, ಪ್ರಾಧ್ಯಾಪಕರು, ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

