ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಯುವಕನ ಕೊಲೆ 

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ  ಮಾಡಲಾಗಿದೆ.

ಭಾನುವಾರ ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ಟಿ.ಸಿ.ಪಾಳ್ಯ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಿರಣ್(25) ಎಂಬ ಯುವಕನನ್ನು ದುಷ್ಕರ್ಮಿಗಳು ತಲೆ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೈದು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement - 

ಹಳೆಯ ದ್ವೇಷಕ್ಕೆ ನಡೀತಾ ಕೊಲೆ?
ಕುಡಿದು ಗಲಾಟೆ ಮಾಡಿದ ಪ್ರಕರಣಗಳು ಸೇರಿದಂತೆ ಕೊಲೆಯಾದ ಕಿರಣ್ ವಿರುದ್ಧ ಕೆ.ಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು
10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು ಎಂಬ ಮಾಹಿತಿಯನ್ನು ಪೊಲೀಸರು ಬಿಚ್ಚಿಟ್ಟಿದ್ದು, ಹಳೆಯ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.
ಘಟನೆಯ ಮುನ್ನರಾತ್ರಿ ಕೂಡ ಕಿರಣ್ ಕುಡಿದು ಗಲಾಟೆ ಮಾಡಿದ್ದು
, ತಡರಾತ್ರಿವರೆಗೆ ವಾಗ್ವಾದ ನಡೆದ ಬಳಿಕ ಮುಂಜಾನೆ ಈ ದಾಳಿ ನಡೆದಿರುವ ಸಾಧ್ಯತೆಯಿದೆ ಎಂದು ಪೊಲಿಸರು ಹೇಳಿದ್ದಾರೆ.

ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ಕಾರ್ಯ ಕೈಗೊಂಡಿದ್ದು, ಸುತ್ತಮುತ್ತಲಿನ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

- Advertisement - 

ಸ್ಥಳೀಯ ನಿವಾಸಿ ಗೋಪಾಲ್ ಮಾತನಾಡಿ, ಕಿರಣ್ ತನ್ನ ತಾಯಿಯೊಂದಿಗೆ ಕಳೆದ ನಾಲ್ಕು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಆಟೋ ಚಾಲನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂದು ತಿಳಿಸಿದ್ದಾರೆ. ಒಟ್ಟಾರೆ, ಈ ಕೊಲೆ ಪ್ರಕರಣ ನಗರದಲ್ಲಿ ಆತಂಕ ಮೂಡಿಸಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಚುರುಕುಗೊಂಡಿದ್ದಾರೆ.

 

Share This Article
error: Content is protected !!
";