ಮಾ.25ರಂದು ಯಡಿಯೂರು ಸಿದ್ಧಲಿಂಗೇಶ್ವರರ ಜಯಂತಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಶ್ರೀ ಮುರುಗಿಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾವಿಶ್ರಾಂತಿ ಸನ್ನಿಧಾನದಲ್ಲಿ ಮಾರ್ಚ್-೨೫ರಂದು ಬುಧವಾರ ಬೆಳಗ್ಗೆ ೮.೩೦ ಗಂಟೆಗೆ ಯಡಿಯೂರು ಸಿದ್ಧಲಿಂಗೇಶ್ವರರ ಜಯಂತಿ(ಶರಣೋತ್ಸವ)ಯನ್ನು ಹಮ್ಮಿಕೊಳ್ಳಲಾಗಿದೆ.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ. ಸಿ. ಕಳಸದ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು.

- Advertisement - 

ಸದಸ್ಯರುಗಳಾದ ಡಾ.ಪಿ.ಎಸ್.ಶಂಕರ್ ಹಾಗೂ ಚಂದ್ರಶೇಖರ್ ಎಸ್.ಎನ್., ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಬಿ. ಗುಡಸಿ ಇವರುಗಳು ಉಪಸ್ಥಿತರಿರುವರು.

ಚಿತ್ರದುರ್ಗ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಅಧಿಕಾರಿ ಶಿವಪ್ರಕಾಶ್ ಡಿ.ಆರ್. ವಿಷಯಾವಲೋಕನ ಮಾಡುವರು. ಕಾರ್ಯಕ್ರಮವು ಎಸ್.ಜೆ.ಎಂ. ಐಟಿಐ ಕಾಲೇಜು ಇವರ ಸಹಯೋಗದಲ್ಲಿ ನಡೆಯಲಿದ್ದು, ಸರ್ವರಿಗೂ ಸ್ವಾಗತವೆಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

- Advertisement - 

 

 

Share This Article
error: Content is protected !!
";